ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ನೌಕರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಹಾಗೂ ಭಾಗಿ
ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ನೌಕರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಹಾಗೂ ಭಾಗಿ
ಡಿಸೆಂಬರ್ 12 ರಂದು ಕರ್ನಾಟಕ ರಾಜ್ಯ ಅನುದಾನಿತರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳು ಮತ್ತು ನೌಕರರ ಒಕ್ಕೂಟ 1995 ರ ನಂತರ ಪ್ರಾರಂಭವಾದ ಶಾಲಾ ಕಾಲೇಜುಗಳಿಗೆ ಅನುದಾನ ನೀಡುವಂತೆ ಬೆಳಗಾವಿಯ ಸುವರ್ಣ ಬಳಿ ಶಾಂತಿಯುತವಾದ ಹೋರಾಟ ನಡೆಸಲು ತಿರ್ಮಾನಿಸಿದೆ.ಇವರ ಹೋರಾಟ ನ್ಯಾಯಯುತವಾಗಿ ದ್ದು ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು ಅಂದು ನಾನು ಸಹ ಹೋರಾಟದಲ್ಲಿ ಭಾಗವಹಿಸಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.