ಅಕ್ರಮವಾಗಿ ಪರೀಕ್ಷೆ ಬರೆಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಅಕ್ರಮವಾಗಿ ಪರೀಕ್ಷೆ ಬರೆಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಕಲಬುರಗಿ: ವಿಶ್ವವಿದ್ಯಾಲಯ ಅಧೀನದಲ್ಲಿ ಬರುವ ಅಲ್ಲಬದರ್ ಕಾಲೇಜಿನಲ್ಲಿ ಹೊರ ರಾಜ್ಯದ 100 ವಿದ್ಯಾರ್ಥಿಗಳಿಂದ ಅಕ್ರಮವಾಗಿ ಪರೀಕ್ಷೆ ಬರೆಸಿರುವುದನ್ನು ಖಂಡಿಸಿ ಕಲಬುರಗಿ ವಿಶ್ವವಿದ್ಯಾಲಯದ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಅಕ್ರಮವಾಗಿ ಪರೀಕ್ಷೆ ಬರೆಸಿರುವು ಬಗ್ಗೆ ಈಗಾಗಲೇ ಪೋಲಿಸಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಿದ್ದರೂ ಕಲಬುರಗಿ ವಿಶ್ವವಿದ್ಯಾಲಯದ ವಿಸಿಗಳಿಗೆ ಮನವಿ ಮಾಡಿದರು ಅವರು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಕೂಡಲೇ ತಪ್ಪಿತಸ್ಥರಿಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಾಬುರಾವ್ ಬೀಳಗಿ, ಮಲ್ಲಿಕಾರ್ಜುನ್ ಸಂಗೊಳಗಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.