ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನಕ್ಕೆ ಡಾ ಅಂಬಾರಾಯ ಅಷ್ಠಗಿ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನಕ್ಕೆ ಡಾ ಅಂಬಾರಾಯ ಅಷ್ಠಗಿ ಸಂತಾಪ
ಕಲಬುರಗಿ : ಕರ್ನಾಟಕ ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ, ಶಿಸ್ತು ಹಾಗೂ ಪ್ರಬುದ್ಧ ಆಡಳಿತಕ್ಕೆ ಮಾದರಿಯಾಗಿದ್ದ ನಾಡಿನ ಇತಿಹಾಸದಲ್ಲಿ ತಮ್ಮ ಸಜ್ಜನಿಕೆ ಹಾಗೂ ಘನತೆಯ ನಡವಳಿಕೆಯಿಂದ ವಿಶೇಷ ಛಾಪು ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧಾನಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಹುದ್ದೆಗಳನ್ನು ಅಲಂಕರಿಸಿ ಇತಿಹಾಸದಲ್ಲಿ ತಮ್ಮ ಶಾಶ್ವತ ಹೆಜ್ಜೆ ಗುರುತು ಮೂಡಿಸಿರುವ ಹೆಮ್ಮೆಯ ಕನ್ನಡಿಗ ಎಸ್.ಎಂ ಕೃಷ್ಣರವರು ಮುಖ್ಯಮಂತ್ರಿಗಳಾಗಿ ಕರ್ನಾಟಕದ ಅಭಿವೃದ್ಧಿಗೆ ಅದರಲ್ಲೂ ಬೆಂಗಳೂರನ್ನು ಸಿಲಿಕಾನ್ ಸಿಟಿ ಎನಿಸಿಕೊಳ್ಳಲು ಕೊಟ್ಟ ಕೊಡುಗೆ ಎಂದೆಂದಿಗೂ ಮರೆಯಲಾಗದು.
ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಅವರ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಡಾ ಅಂಬಾರಾಯ ಅಷ್ಠಗಿ ಪ್ರಾರ್ಥಿಸಿದ್ದಾರೆ.