ಎಂ ಎಸ್ ಇರಾಣಿ ಕಾಲೇಜಿನ ವಿದ್ಯಾರ್ಥಿಗಳು ದಕ್ಷಿಣ ಭಾರತ ಅಂತರ ವಿವಿ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆ

ಎಂ ಎಸ್ ಇರಾಣಿ ಕಾಲೇಜಿನ ವಿದ್ಯಾರ್ಥಿಗಳು ದಕ್ಷಿಣ ಭಾರತ ಅಂತರ ವಿವಿ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆ

ಎಂ ಎಸ್ ಇರಾಣಿ ಕಾಲೇಜಿನ ವಿದ್ಯಾರ್ಥಿಗಳು ದಕ್ಷಿಣ ಭಾರತ ಅಂತರ ವಿವಿ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದ ವಿಧ್ಯಾರ್ಥಿಗಳು ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದ ಅಂತರ ವಿದ್ಯಾಲಯಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.ಆ ಪಂದ್ಯದಲ್ಲಿ ಭಾಗವಹಿಸಿದ್ದ ಬಿ ಎ 5 ನೇಯ ಸೆಮಿಸ್ಟರ್ ವಿದ್ಯಾರ್ಥಿ ಭೀಮರಾಯ ಬೆಸ್ಟ್ ಶೂಟರ್ ಎಂಬ ವೈಯಕ್ತಿಕ ಪ್ರಶಸ್ತಿ ಪಡೆದಿದುಕೊಂಡಿದ್ದಾನೆ. ಬಿ ಎ 1 ನೇ ಸೆಮಿಸ್ಟರ್ ವಿದ್ಯಾರ್ಥಿ ಅಂಬರೀಷ್ ಅತ್ಯುತ್ತಮ ಆಟಗಾರನಾಗಿ ಹೊರ ಹೊಮ್ಮಿದ್ದಾನೆ. ಈ ಇಬ್ಬರು ವಿದ್ಯಾರ್ಥಿಗಳು ಇದೆ ತಿಂಗಳು ಡಿಸೆಂಬರ್ 18 ರಿಂದ 22 ವರೆಗೆ ಕೇರಳ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯಗಳ ಮಟ್ಟದ ವಾಲಿಬಾಲ್ ಪಂದ್ಯಾವಳಿಗಳಲ್ಲಿ ಆಯ್ಕೆಯಾಗಿ ಗುಲ್ಬರ್ಗಾ ವಿಶ್ವವಿದ್ಯಾಲಯ ಪ್ರತಿನಿದಿಸಲಿದ್ದಾರೆ. ಈ ಹೆಮ್ಮೆಯ ಸಾಧನೆ ಮಾಡಿ ಸಂಸ್ಥೆಗೆ ಹಾಗೂ ಕಾಲೇಜಿಗೆ ಹೆಸರು ತಂದಿರುವ ಇವರನ್ನು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಕಾಲೇಜಿನ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ನಾಗಣ್ಣ ಘಂಟಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಪ್ರೋ ರೋಹಿಣಿಕುಮಾರ್ ಹಿಳ್ಳಿ ಕ್ರೀಡಾ ನಿರ್ದೇಶಕರಾದ ಡಾ ಶಂಕ್ರಪ್ಪ ಕಲಬುರ್ಗಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.