ಶಾಲಾ ದಿನಗಳಲ್ಲಿಯೇ ಮಕ್ಕಳಲ್ಲಿ ಸ್ಕಿಲ್ ಡೆವಲಪ್ಮೆಂಟ್ ಬಹಳ ಅವಶ್ಯವಾಗಿದೆ : ಶಶೀಲ ಜಿ. ನಮೋಶಿ
ಶಾಲಾ ದಿನಗಳಲ್ಲಿಯೇ ಮಕ್ಕಳಲ್ಲಿ ಸ್ಕಿಲ್ ಡೆವಲಪ್ಮೆಂಟ್ ಬಹಳ ಅವಶ್ಯವಾಗಿದೆ : ಶಶೀಲ ಜಿ. ನಮೋಶಿ
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸ್ವರ್ಣಜಯಂತಿ ಹಾಗೂ ಭಾರತೀಯ ಸಂಸ್ಕೃತಿ ಉತ್ಸವ-07 ರ ಅಂಗವಾಗಿ ತಾಲೂಕು ಹಂತದ - ಕಲಬುರಗಿ ದಕ್ಷಿಣ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಮಹಾವಿದ್ಯಾಲಯದಲ್ಲಿ ಆಯೋಜಿಸಲಾಯಿತು.
ಸದರಿ ಕಾರ್ಯಕ್ರಮಕ್ಕೆ ಕಲ್ಯಾಣ ಕರ್ನಾಟಕದ ಶಿಕ್ಷಕರ ಕಣ್ಮಣ , ವಿಧಾನ ಪರಿಷತ್ ಸದಸ್ಯರು ಹಾಗೂ ಹೈದ್ರಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಶೀಲ ಜಿ. ನಮೋಶಿ ಉದ್ಘಾಟಕರಾಗಿ ಆಗಮಿಸಿ ಸಸಿಗೆ ನೀರುಣ ಸುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಸರಿಯಾದ ರೀತಿಯಲ್ಲಿ ಬದುಕಬೇಕಾದರೇ, ನಮಗೆ ಬೇಕಾದುದನ್ನು ಪಡೆಯಬೇಕೆದಾರೆ ಮನುಷ್ಯನಿಗೆ ಸ್ಕಿಲ್ ಬಹಳ ಮುಖ್ಯವಾಗುತ್ತದೆ. ಇತ್ತಿಚಿನ ದಿನಗಳಲ್ಲಿ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಬೇಕಾದರು ಸ್ಕಿಲ್ ಬಹಳ ಮುಖ್ಯವಾಗಿದೆ. ಅದಕ್ಕಾಗಿ ಶಾಲಾ ದಿನಗಳಲ್ಲಿಯೇ ಮಕ್ಕಳಲ್ಲಿ ಸ್ಕಿಲ್ ಡೆವಲಪ್ಮೆಂಟ್ ಬಹಳ ಅವಶ್ಯವಾಗಿದೆ. ಈ ದಿಸೆಯಲ್ಲಿ ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ಕಲಿಯಲು ಮತ್ತು ಕೌಶಲ್ಯಗಳನ್ನು ಅಭಿವೃದ್ದಿ ಪಡಿಸಿಕೊಳ್ಳಲು ಆಸಕ್ತಿ ಬೆಳಸಬೇಕು ಎಂದು ಮಾತನಾಡಿದರು.
ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸ್ವರ್ಣಜಯಂತಿ ಹಾಗೂ ಭಾರತೀಯ ಸಂಸ್ಕೃತಿ ಉತ್ಸವ-07ರ ಅಂಗವಾಗಿ ಆಯೋಜಿಸಲಾಗಿರುವ ವಿವಿಧ ಸ್ಪರ್ಧೆಗಳ ಕಲಬುರಗಿ ಜಿಲ್ಲಾ ಸಂಚಾಲಕರಾದ ಡಾ. ಅಶೋಕ ಜೀವಣಗಿ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಮಹಿಳಾ ಮಹಾವಿದ್ಯಾಲಯ ಕಲಬುರಗಿಯ ಪ್ರಾಚಾರ್ಯರಾದ ಟಾ. ರಾಜೇಂದ್ರ ಕೊಂಡಾ ಅವರು ವಹಿಸಿ ಪ್ರಕೃತಿ ಕೇಂದ್ರಿತ ಅಭಿವೃದ್ದಿಯನ್ನು ಪರಿಗಣ ಸಿ ನಿಸರ್ಗಕ್ಕೆ ಹಾನಿಯಾಗದಂತೆ, ಪರಿಸರವನ್ನು ಶೋಷಣೆ ಮಾಡದೆ, ಸ್ವಾಭಾವಿಕ ಸಂಪನ್ಮೂಲಗಳಿಗೆ ದಕ್ಕೆಯಾಗದ ರೀತಿಯಲ್ಲಿ ಮುಂದಿನ ಪೀಳಿಗೆಗೆ ಉಳಿಸುವುದರ ಅರಿವನ್ನು ಮೂಡಿಸುವುದರ ಜೊತೆಗೆ ಮಕ್ಕಳ್ಳಲ್ಲಿ ವಿವಿಧ ಕೌಶಲ್ಯಗಳನ್ನು ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಾತನಾಡಿದರು.
ಕಾರ್ಯಕ್ರಮ ವೇದಿಕೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಬಿ.ಆರ್.ಸಿ. ಆದಂತಹ ಡಾ. ಪ್ರಕಾಶ ರಾಠೋಡ, ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ, ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯ ಶ್ರೀ. ಶಾಂತರೆಡ್ಡಿ, ಶ್ರೀ. ಲಕ್ಷಿನಾರಾಯಣ ಹೆಬ್ಬಾರ, ಶ್ರೀ ವಿಶ್ವನಾಥ ವಸ್ತ್ರದ, ಶ್ರೀ ಮುರಳಿಧರ ಅವರು ಉಪಸ್ಥಿತರಿದ್ದರು ಮತ್ತು ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ ಶಿಕ್ಷಕರು, ಮಕ್ಕಳು-ಪಾಲಕರು ಹಾಗೂ ಮಾಧ್ಯಮದ ಪ್ರತಿನಿಧಿಗಳು ಪಾಲ್ಗೋಂಡಿದ್ದರು ಎಂದು ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ
.