ಅಂಬೇಡ್ಕ‌ರ್ ಅವಹೇಳನ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಅಂಬೇಡ್ಕ‌ರ್ ಅವಹೇಳನ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಅಂಬೇಡ್ಕ‌ರ್ ಅವಹೇಳನ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕಲಬುರಗಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ದಲಿತ ಜನಜಾಗೃತಿ ಸಂಘರ್ಷ ಸಮಿತಿ ವಿಭಾಗೀಯ ಅಧ್ಯಕ್ಷ ಜೈರಾಜ ಕಿಣಗಿಕರ್ ಅವರು ಆಗ್ರಹಿಸಿದ್ದಾರೆ.

         ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು,ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಅಂಬೇಡ್ಕರ್ 

ಹೆಸರು ಉಚ್ಚರಿಸುವುದು ಈಗ ಫ್ಯಾಷನ್ ಆಗಿದೆ. ಅಂಬೇಡ್ಕರ್ ಹೆಸರು ಉಚ್ಚರಿಸುವ ಬದಲು ದೇವರ ಹೆಸರನ್ನು ಉಚ್ಚರಿಸಿದರೆ ಏಳು ಜನ್ಮದವರೆಗೂ ಸ್ವರ್ಗ ಪಡೆಯಬಹುದು ಎಂದು ಹೇಳಿಕೆ ನೀಡುವ ಮೂಲಕ ಅಂಬೇಡ್ಕರ್ ರವರಿಗೆ ಅಪಮಾನ ಮಾಡಿದ್ದಾರೆ. 

ಈ ಕೂಡಲೆ ಈ ಕೂಡಲೇ ಅಮಿತ್ ಶಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.      

     ಡಾ. ಬಿ.ಆರ್. ಅಂಬೇಡ್ಕರ್ ಭಾರತೀಯ ಪ್ರಜಾಪ್ರಭುತ್ವ ಸಮಾನತೆ ಮತ್ತು ನ್ಯಾಯಾದ ಸಿದ್ದಾಂತಗಳಿಗೆ ಅಡಿಪಾಯ ಹಾಕಿದ ಮಹಾನ್ ನಾಯಕರು.ಅವರ ಹೆಸರು ಮಾತ್ರವಲ್ಲ, ಅವರ ಆದರ್ಶಗಳು ಮತ್ತು ಅವರ ಕೃತಿಗಳು ಕೋಟ್ಯಂತರ ಭಾರತೀಯರಿಗೆ ಸ್ಪೂರ್ತಿಯಾಗಿದೆ. ಹೀಗಿದ್ದರೂ ಸಹ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ದೇಶದ ಸಂವಿಧಾನದ ಅಡಿಪಾಯವನ್ನು ದೂಷಿಸುತ್ತದೆ ಮತ್ತು ಸಮಾಜದ ಹೀನ ವರ್ಗಗಳ ಭಾವನೆಗೆ ಧಕ್ಕೆಯುಂಟಾಗುತ್ತಿದೆ ಎಂದು ಅವರು ಹೇಳಿದರು. 

   ಪ್ರಜಾಪ್ರಭುತ್ವದ ವಿರುದ್ಧವಾದ,ಸಮಾನತೆಗೆ ವಿರುದ್ಧವಾದ ಮತ್ತು ಅಂಬೇಡ್ಕ‌ರ್ ಗೌರವಕ್ಕೆ ಅವಮಾನಕರ ಹೇಳಿಕೆ ನೀಡಿರುವ ಅಮಿತ್ ಶಾ ಕೇಂದ್ರ ಗೃಹ ಸಚಿವರ ಸ್ಥಾನಕ್ಕೆ ತಕ್ಕವರಲ್ಲ, ಆದ್ದರಿಂದ ಈ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.