ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಿ ಡಿ ಇ ಕಾರ್ಯಕ್ರಮ

ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಿ ಡಿ ಇ ಕಾರ್ಯಕ್ರಮ

 ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಿ ಡಿ ಇ ಕಾರ್ಯಕ್ರಮ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ದಿನಾಂಕ 27/12/2024 ರಂದು ಶುಕ್ರವಾರ ಸಮಗ್ರ ಇಂಪ್ಲಾಂಟ್ ಡೆಂಟಿಸ್ಟ್ ರಿ ವಿಷಯದ ಕುರಿತು ಒಂದು ದಿನದ ಮುಂದುವರಿದ ದಂತ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ನಡೆಯಲಿದೆ

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಕಾಲೇಜಿನ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಡಾ ಅನಿಲಕುಮಾರ ಪಟ್ಟಣ,ಡಾ ಕಿರಣ್ ದೇಶಮುಖ್ , ನಿಶಾಂತ್ ಎಲಿ, ಪ್ರಾಚಾರ್ಯರಾದ ಡಾ ಜಯಶ್ರೀ ಮುದ್ದಾ, ಉಪ ಪ್ರಾಚಾರ್ಯರಾದ ಡಾ ವಿರೇಂದ್ರ ಪಾಟೀಲ್ ವೇದಿಕೆಯ ಮೇಲೆ ಉಪಸ್ಥಿತರಿಲಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ ಕೆ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.