ಕಲಬುರ್ಗಿಯಲ್ಲಿ ಮಾಹಿತಿ ಹಕ್ಕು ಕಾರ್ಯಗಾರ ಸಭೆ

ಕಲಬುರ್ಗಿಯಲ್ಲಿ  ಮಾಹಿತಿ ಹಕ್ಕು ಕಾರ್ಯಗಾರ ಸಭೆ

ಕಲಬುರ್ಗಿಯಲ್ಲಿ ಮಾಹಿತಿ ಹಕ್ಕು ಕಾರ್ಯಗಾರ ಸಭೆ

 ಕಲಬುರಗಿ : ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ದಿನಾಂಕ 29.12.2024 ರಂದು ಭಾನುವಾರ ದಿನದಂದು ಕಲಬುರಗಿ ನಗರದ ರಾಜರಾಜೇಶ್ವರಿ ಖಾಸಗಿ ಸಭಾಂಗಣದಲ್ಲಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀ ಎಚ್ ಜಿ ರಮೇಶ್ ಕುಣಿಗಲ್ ಅವರ ಮಾರ್ಗದರ್ಶನದಲ್ಲಿ ಒಂದು ದಿನದ ಮಾಹಿತಿ ಹಕ್ಕು ಕಾರ್ಯಗಾರ ನಡೆಯುತ್ತದೆ ಎಂದು ವೇದಿಕೆಯ ಕಲಬುರಗಿ ಜಿಲ್ಲಾಧ್ಯಕ್ಷರಾದ ರಾಜೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ 

ಈ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಚನ್ನಯ್ಯವಸ್ತ್ರದ ಹಾಗೂ ರಾಜ್ಯ ಉಪಾಧ್ಯಕ್ಷರಾದ ಟಿ ಎಚ್ ಎಂ ರಾಜಕುಮಾರ್ ಅವರು ಸೇರಿದಂತೆ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಜೊತೆಗೆ ಇತರೆ ಮಾಹಿತಿ ಹಕ್ಕು ಕಾರ್ಯಕರ್ತರು ಕೂಡ ಭಾಗವಹಿಸಲಿದ್ದಾರೆ ಅಷ್ಟೇ ಅಲ್ಲದೆ ಈ ಕಾರ್ಯಕ್ರಮದಲ್ಲಿ ನೂತನವಾಗಿ ಸಂಘಟನೆಗೆ ಸೇರ್ಪಡೆಗೊಳ್ಳುವ ಕಾರ್ಯಕರ್ತರಿಗೆ ಮುಕ್ತ ಅವಕಾಶವಿರುತ್ತದೆ ಈ ಸಂಘಟನೆಗೆ ಸೇರಿಕೊಳ್ಳಲು ಆಸಕ್ತಿ ಇರುವಂತಹ ಮಾಹಿತಿ ಹಕ್ಕು ಕಾರ್ಯಕರ್ತರು ಕೂಡ ಭಾಗವಹಿಸಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ