ಕೃಷಿಕ ಸಮಾಜದ ಅಧ್ಯಕ್ಷರಾಗಿ ಶರಣಗೌಡ ಪಾಟೀಲ ಆಯ್ಕೆ :..
ಕೃಷಿಕ ಸಮಾಜದ ಅಧ್ಯಕ್ಷರಾಗಿ ಶರಣಗೌಡ ಪಾಟೀಲ ಆಯ್ಕೆ :..
ಶಹಾಬಾದ : - ಈಚೆಗೆ ಶಹಾಬಾದ ತಾಲ್ಲೂಕು ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆ ನಡೆಯಿತು.
ತಾಲ್ಲೂಕು ಕೃಷಿಕ ಸಮಾಜದ ಪದಾಧಿಕಾರಿಗಳ ಅವಧಿ ಐದು ವರ್ಷಗಳಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಚುನಾವಣೆ ನಡೆದು ತಾಲ್ಲೂಕ ಅಧ್ಯಕ್ಷರಾಗಿ ಶರಣಗೌಡ ಪಾಟೀಲ ಆಯ್ಕೆಯಾದರು.
ಕೃಷಿ ಅಧಿಕಾರಿಗಳ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು, ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಆದೇಶ ಪ್ರತಿಗಳನ್ನು ವಿತರಿಸಿ, ಸನ್ಮಾನಿಸಲಾಯಿತು.
ಹರ್ಷ ವ್ಯಕ್ತಪಡಿಸಿ ಸನ್ಮಾನ :..ಶರಣಗೌಡ ಪಾಟೀಲ ಕೃಷಿಕ ಸಮಾಜದ ಅಧ್ಯಕ್ಷರಾಗಿ ದ್ದಕ್ಕೆ ನಗರದ ಗಣ್ಯರು ಹರ್ಷ ವ್ಯಕ್ತಪಡಿಸಿ, ಗೌರವಿಸಿ, ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ದಸಂಸ ರಾಜ್ಯ. ಸಂ. ಸಂಚಾಲಕ ಮರಿಯಪ್ಪ ಹಳ್ಳಿ, ಕಾಂಗ್ರೆಸ್ ಅಧ್ಯಕ್ಷ ಡಾ. ಎಂಎ ರಶೀದ, ಬಿಜೆಪಿ ಮಾಜಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಮಾಣಿಕಗೌಡ ಪಾಟೀಲ, ಹಾಷಮ ಖಾನ, ಬಸವರಾಜ ಮದ್ದರಕಿ, ಬಾಕ್ರೋದ್ದಿನ, ಬಾಬುರಾವ ಪಂಚಾಳ, ಪೀರ ಪಾಷಾ ಇದ್ದರು.
ಶಹಾಬಾದ:-ಸುದ್ದಿ ನಾಗರಾಜ್ ದಂಡಾವತಿ