ವಾಡಿ ಬಿಜೆಪಿ ಕಛೇರಿಯಲ್ಲಿ ಮನ್ ಕಿ ಬಾತ್ ವೀಕ್ಷಣೆ

ವಾಡಿ ಬಿಜೆಪಿ ಕಛೇರಿಯಲ್ಲಿ ಮನ್ ಕಿ ಬಾತ್ ವೀಕ್ಷಣೆ

ವಾಡಿ ಬಿಜೆಪಿ ಕಛೇರಿಯಲ್ಲಿ ಮನ್ ಕಿ ಬಾತ್ ವೀಕ್ಷಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 117ನೇ ಸಂಚಿಕೆಯ ಮನ್ ಕಿ ಬಾತ್ ಕಾರ್ಯಕ್ರಮವನ್ನು ಮುಖಂಡರು ವೀಕ್ಷಿಸಿದರು.

ವೀಕ್ಷಣೆಯ ನಂತರ ಸ್ಥಳೀಯ ಅಧ್ಯಕ್ಷ ವೀರಣ್ಣ ಯಾರಿ ಬರುವ ಜನವರಿ 26ರಂದು

ನಮ್ಮ ಸಂವಿಧಾನವು 75 ವರ್ಷಗಳನ್ನು ಪೂರೈಸುತ್ತಿರು ಹೆಮ್ಮೆಯ ವಿಷಯ ಬಗ್ಗೆ ಹಾಗು ನಾವು ಕೈಗೊಳ್ಳಬೇಕಾದ ಕಾರ್ಯಗಳನ್ನು ಮೋದಿ ತಿಳಿಸಿದ್ದಾರೆ ಎಂದರು.

ಸಂವಿಧಾನವು ನಮಗೆ ಮಾರ್ಗದರ್ಶಕ ಬೆಳಕು ಮತ್ತು ನಮಗೆ ಮಾರ್ಗದರ್ಶನ ಮಾಡುತ್ತಿದೆ ಎಂದು ಹೇಳಿದರು.ಇದರ ಗೌರವಾರ್ಥವಾಗಿ ಸಂವಿಧಾನ ಪೀಠಿಕೆಯನ್ನು ಓದಲು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲು ನಾಗರಿಕರಿಗೆ ಅವರು ಅವಕಾಶ ಕಲ್ಪಿಸಿದ್ದಾರೆ.

ದೇಶದ ನಾಗರಿಕರನ್ನು ಸಂವಿಧಾನದ ಪರಂಪರೆಯೊಂದಿಗೆ ಸಂಪರ್ಕಿಸಲು ವಿಶೇಷ ವೆಬ್‌ಸೈಟ್‌ http://Constitution75.com ಅನ್ನು ರಚಿಸಿ ಇದರಲ್ಲಿ, ನಾವು ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ನಮ್ಮ ವೀಡಿಯೊವನ್ನು ಅಪ್‌ಲೋಡ್‌ ಮಾಡಬಹುದು ಎಂದು ತಿಳಿಸಿದ್ದಾರೆ.

ಜನವರಿ 13ರಿಂದ ಪ್ರಯಾಗರಾಜ್‌ನಲ್ಲಿ ನಡೆಯಲಿರುವ ಮಹಾಕುಂಭದ ಮಹತ್ವದ ಬಗ್ಗೆ,ಈ ಬೃಹತ್‌ ಧಾರ್ಮಿಕ ಕಾರ್ಯಕ್ರಮದ ಏಕತೆಯ ಸಂದೇಶವನ್ನು ಮತ್ತು ಪ್ರಪಂಚದಾದ್ಯಂತದ ಭಕ್ತರು ಪ್ರಯಾಗರಾಜ್‌ನಲ್ಲಿ ಡಿಜಿಟಲ್‌ ಮಹಾಕುಂಭಕ್ಕೆ ಸಾಕ್ಷಿಯಾಗಲಿರುವುದನ್ನು ಸೇರಿದಂತೆ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜೊತೆಗೆ ದೇಶದ ವಿವಿಧ ಭಾಗಗಳಲ್ಲಿ ಜನರ ಪ್ರಯತ್ನಗಳನ್ನು ವಿವರಿಸಿದ್ದನ್ನು ನಾವು ಇಂದಿನ ಸಂಚಿಕೆಯಲ್ಲಿ ಕಂಡಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ವಿಠಲ ವಾಲ್ಮೀಕ ನಾಯಕ,ರಾಜೇಶ ಅಗ್ರವಾಲ,ಕಿಶನ ಜಾಧವ,ಪ್ರಮೋದ ಚೊಪಡೆ,

ಶಂಕರ ಚಿನ್ನ ರಾಠೊಡ, ಕುಮಾರ ಜಾಧವ,ಗುರುನಾಥ ಚವ್ಹಾಣ ಸೇರಿದಂತೆ ಇತರರು ಇದ್ದರು.