ಸಚಿನ್ ಆತ್ಮಹತ್ಯೆ: ಬಿಜೆಪಿಯಿಂದ ಕ್ಷುಲ್ಲಕ ರಾಜಕೀಯ
ಸಚಿನ್ ಆತ್ಮಹತ್ಯೆ: ಬಿಜೆಪಿಯಿಂದ ಕ್ಷುಲ್ಲಕ ರಾಜಕೀಯ
ಕಲಬುರಗಿ: ಬಿಜೆಪಿಗರು ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಕೇಸ್‌ನ್ನು ರಾಜಕೀಯ ಕಾರಣಕ್ಕೆ ಬಳಸಿಕೊಂಡು ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೂ ಸಚಿವ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ. ಪ್ರಿಯಾಂಕ್ ರಾಜೀನಾಮೆ ಅವಶ್ಯಕತೆಯಿಲ್ಲ ಎಂದು ಅಖಿಲ ಕರ್ನಾಟಕ ಡಾ.ಎಚ್.ಸಿ.ಮಹಾದೇವಪ್ಪ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಓಂಕಾರ ವಠಾರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿನ್ ಸಾವಿನ ಬಗ್ಗೆ ತಮಗೂ, ತಮ್ಮ ಪಕ್ಷಕ್ಕೂ ನೋವಿದೆ. ಈ ಆತ್ಮಹತ್ಯೆ ಪ್ರಕರಣಕ್ಕೂ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ. ಅನಗತ್ಯವಾಗಿ ಬಿಜೆಪಿಯವರು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಹೇರುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಪ್ರತಿಪಕ್ಷಗಳು ಸಾವಿನ ಮನೆಯಲ್ಲಿ ರಾಜಕೀಯ ಮಾಡುತ್ತಿವೆ ಎಂದು ಆರೋಪಿಸಿದರು. ಗುತ್ತಿಗೆದಾರ ಸಚಿನ್ ಸೂಸೈಡ್ ಕೇಸ್‌ಗೂ ಪ್ರಿಯಾಂಕ್ ಖರ್ಗೆ ಅವರಿಗೂ ಸಂಬಂಧವಿಲ್ಲವೆಂದು ಗೊತ್ತಿದ್ದರೂ ಇದನ್ನು ರಾಜಕೀಯ ಕಾರಣಕ್ಕೆ ಬಿಜೆಪಿ ಬಳಸಿಕೊಳ್ಳಿದೆ. ಈ ಬಗ್ಗೆ ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ಸ್ವತಃ ಪ್ರಿಯಾಂಕ್ ಖರ್ಗೆ ಅವರೇ ತನಿಖೆಗೆ ಆಗ್ರಹಿಸಿದ್ದಾರೆ. ಆದರೂ ಬಿಜೆಪಿ ನಾಯಕರು ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇದು ನಿಲ್ಲಬೇಕು ಇಲ್ಲವಾದರೆ ಜನರೇ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ. ಬಿಜೆಪಿ ಅನಾವಶ್ಯಕ ಅಪಾದನೆ ಮಾಡುತ್ತಿದೆ. ಸಚಿನ್ ಡೆತ್ ನೋಟ್‌ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿಲ್ಲ. ಎಲ್ಲಾ ಕೇಸ್‌ಗಳನ್ನು ಸಿಬಿಐಗೆ ನೀಡಲಾಗಲ್ಲ. ಎಲ್ಲದರಲ್ಲಿಯೂ ಹುಳುಕು ಹುಡುಕುವುದು ತಪ್ಪು. ಕೇಸರಿ ನಾಯಕರು ಟೀಕೆ ಟಿಪ್ಪಣಿ ಮಾಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.