ನಿಯಮಿತ ರಕ್ತದಾನವು ಹೃದಯಾಘಾತ ಅಪಾಯವನ್ನು ಕಡಿಮೆ ಮಾಡುತ್ತದೆ ಶಶೀಲ್ ಜಿ ನಮೋಶಿ

ನಿಯಮಿತ ರಕ್ತದಾನವು ಹೃದಯಾಘಾತ ಅಪಾಯವನ್ನು ಕಡಿಮೆ ಮಾಡುತ್ತದೆ ಶಶೀಲ್ ಜಿ ನಮೋಶಿ

ನಿಯಮಿತ ರಕ್ತದಾನವು ಹೃದಯಾಘಾತ ಅಪಾಯವನ್ನು ಕಡಿಮೆ ಮಾಡುತ್ತದೆ ಶಶೀಲ್ ಜಿ ನಮೋಶಿ 

ನಿಯಮಿತ ರಕ್ತದಾನವು ಹೃದಯರಕ್ತನಾಳದ ಆರೋಗ್ಯದ ಅಪಾಯವನ್ನು ಸುಧಾರಿಸುತ್ತದೆ ಮತ್ತು ಕಡಿಮೆ ಮಾಡುತ್ತದೆ. ಇದು ರಕ್ತದ ಸ್ನಿಗ್ಧತೆಯನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ರಕ್ತದ ಹರಿವನ್ನು ಉತ್ತೇಜಿಸುತ್ತದೆ. ರಕ್ತದ ಹರಿವು ಉತ್ತಮವಾದಾಗ, ಅದು ರಕ್ತ ಹೆಪ್ಪುಗಟ್ಟುವಿಕೆಯ ರಚನೆಯನ್ನು ತಡೆಯುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾತೋಶ್ರೀ ತಾರಾದೇವಿ ರಾಂಪೂರೆ ಔಷದ ವಿಜ್ಞಾನ ಸಂಸ್ಥೆಯ ಔಷಧಿ ವಿಜ್ಞಾನ ಅಭ್ಯಾಸ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಕಲಬುರ್ಗಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಡೆದ ರಕ್ತ ದಾನ ಶಿಬಿರ ಉದ್ಘಾಟಿಸಿ ಮಾತನಾಡುತ್ತಿದ್ದರು.

ರಕ್ತದಾನದಿಂದ ಅದೆಷ್ಟೋ ಜನರ ಜೀವ ಉಳಿದಿದೆ. ಅನೇಕ ಬಾರಿ ಮಾರಣಾಂತಿಕ ಪರಿಸ್ಥಿತಿಯಲ್ಲಿ ಬಳಲುತ್ತಿರುವ ರೋಗಿಗಳಿಗೆ ರಕ್ತದಾನ ಜೀವ ಉಳಿಸಿದೆ. ಹಾಗೂ ದಾನಿಗಳಿಗೂ ಕೂಡಾ ಆರೋಗ್ಯದ ಪ್ರಯೋಜನಗಳನ್ನು ನೀಡುತ್ತದೆ ಎಂದು ಹೇಳಿದರು. ಇಂದು ನಮ್ಮ ಸಂಸ್ಥೆಯ ಔಷಧಿ ವಿಜ್ಞಾನ ಮಹಾವಿದ್ಯಾಲಯದ ವಿಧ್ಯಾರ್ಥಿಗಳು ಇಂತಹ ರಕ್ತ ದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ರಕ್ತದಿಂದ ಅಪಾಯದಲ್ಲಿ ಇರುವ ರೋಗಿಗಳಿಗೆ ಸಹಾಯ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ಕಲಬುರ್ಗಿ ಜಿಲ್ಲೆಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಅರುಣಕುಮಾರ ಲೋಯಾ ಮಾತನಾಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ( IRCS ) ಭಾರತದಲ್ಲಿ ನೆಲೆಗೊಂಡಿರುವ ಮಾನವ ಜೀವನ ಮತ್ತು ಆರೋಗ್ಯವನ್ನು ರಕ್ಷಿಸಲು ಸ್ವಯಂಪ್ರೇರಿತ ಮಾನವೀಯ ಸಂಸ್ಥೆಯಾಗಿದೆ . ಇದು ಅಂತರಾಷ್ಟ್ರೀಯ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳುವಳಿಯ ಭಾಗವಾಗಿದೆ ಮತ್ತು ಅಂತರರಾಷ್ಟ್ರೀಯ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಚಳುವಳಿಯ ಮೂಲಭೂತ ತತ್ವಗಳನ್ನು ಹಂಚಿಕೊಳ್ಳುತ್ತದೆ ಎಂದು ರೆಡ್ ಕ್ರಾಸ್ ಬಗ್ಗೆ ವಿವರಿಸಿದರು. ನಂತರ ಕಾಲೇಜಿನ ಪ್ರಾಚಾರ್ಯರಾದ ಡಾ ಪ್ರಕಾಶ್ ಸರಸಂಬಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಡಾ ಕಲ್ಯಾಣ ಸಜ್ಜನ ಮಾತನಾಡಿದರು. ಈ ಶಿಬಿರದಲ್ಲಿ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಕಾಲೇಜಿನ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಆದ ಅನಿಲಕುಮಾರ ಮರಗೋಳ, ನಾಗಣ್ಣ ಘಂಟಿ,ಡಾ ಮಹಾದೇವಪ್ಪ ರಾಂಪೂರೆ, ಸಾಯಿನಾಥ ಪಾಟೀಲ್ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳಾದ ವಿಶ್ವನಾಥ್ ಕೋರವಾರ, ಡಾ ಸೈಯದ್ ಕಾಲೇಜಿನ ನಿರ್ದೇಶಕರಾದ ಅಶೋಕ್ ಕುಮಾರ್ ದಸ್ತಾಪೂರ ಔಷಧಿ ಅಭ್ಯಾಸ ವಿಭಾಗದ ಮುಖ್ಯಸ್ಥರಾದ ಡಾ ನೀಲಕಂಠರೆಡ್ಡಿ ಪಾಟೀಲ್ ಉಪಸ್ಥಿತರಿದ್ದರು ಉಪ ಪ್ರಾಚಾರ್ಯರಾದ ಡಾ ಲಿಂಗರಾಜ ಡೆಂಕಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.