ಪ್ರತಿಭಾ ಕಾರಂಜಿಯಲ್ಲಿ ಫಯಾಜ್ ರಾಜ್ಯಮಟ್ಟಕ್ಕೆ ಆಯ್ಕೆ

ಪ್ರತಿಭಾ ಕಾರಂಜಿಯಲ್ಲಿ ಫಯಾಜ್ ರಾಜ್ಯಮಟ್ಟಕ್ಕೆ ಆಯ್ಕೆ

ಪ್ರತಿಭಾ ಕಾರಂಜಿಯಲ್ಲಿ ಫಯಾಜ್ ರಾಜ್ಯಮಟ್ಟಕ್ಕೆ ಆಯ್ಕೆ

ಶಹಾಪುರ : ತಾಲೂಕಿನ ಸಗರ ಗ್ರಾಮದ ಕಾವೇರಿ ವಿದ್ಯಾ ಮಂದಿರದಲ್ಲಿ 8 ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಫಯಾಜ್ ತಂದೆ ಹುಸೇನ್ ಸಾಬ್ ಜಿಲ್ಲಾ ಮಟ್ಟದಲ್ಲಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ, ಯಾದಗಿರಿ ಉಪ ನಿರ್ದೇಶಕರ ಕಾರ್ಯಾಲಯ,ಶಾಲಾ ಶಿಕ್ಷಣ ಇಲಾಖೆ ಯಾದಗಿರಿ,ಸಹಯೋಗದಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಸಗರದ ಕಾವೇರಿ ವಿದ್ಯಾ ಮಂದಿರ ಮಕ್ಕಳಿಗೆ ಲಭಿಸಿದೆ.

ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ಕೀರ್ತಿ ತಂದೆ ಶಿವಶರಣಪ್ಪ ಪದ್ಯ ವಾಚನ ವಿಭಾಗದಲ್ಲಿ ಭಾಗವಹಿಸಿ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ,ಈ ಸಂದರ್ಭದಲ್ಲಿ ಕಾವೇರಿ ವಿದ್ಯಾ ಮಂದಿರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ದೇವೇಂದ್ರಪ್ಪ ಹಡಪದ ಹಾಗೂ ಆಡಳಿತ ಮಂಡಳಿ ಮತ್ತು ಶಾಲಾ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.