ರಾಜ್ಯದ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕು ಶಶೀಲ್ ಜಿ ನಮೋಶಿ

ರಾಜ್ಯದ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕು ಶಶೀಲ್ ಜಿ ನಮೋಶಿ

ರಾಜ್ಯದ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕು ಶಶೀಲ್ ಜಿ ನಮೋಶಿ 

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕಿಯರು ಮತ್ತು ಮುಖ್ಯ ಶಿಕ್ಷಕಿಯರ ಮೇಲೆ ಪ್ರಸಕ್ತ ಸಾಲಿನಲ್ಲಿ ವಿವಿಧ ರೀತಿಯ 185 ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಕುರಿತು ಸ್ವತಃ ವಿಷಾದ ವ್ಯಕ್ತಪಡಿಸಿರುವ ರಾಷ್ಟ್ರೀಯ ಶಿಕ್ಷಣ ಆಡಳಿತ ಸುಧಾರಣೆ ಮತ್ತು ತನಿಖಾ ದಳ,ಶಿಕ್ಷಕಿಯರಿಗೆ ಕಾನೂನಾತ್ಮಕ, ಸಂವಿಧಾನಾತ್ಮಕ ರಕ್ಷಣೆ ಒದಗಿಸಬೇಕೆಂದು ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದೆ.ವರದಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬಂದಿರುವುದು ಆಘಾತಕಾರಿ ವಿಷಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಕಳವಳ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರು, ಮುಖ್ಯ ಶಿಕ್ಷಕರಿಯರ ಮೇಲೆ ಲೈಂಗಿಕ, ಇತರ ದೌರ್ಜನ್ಯ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿದ್ದವು. ಹಾಗಾಗಿ ಪ್ರಸಕ್ತ ಸಾಲಿನಲ್ಲಿ ರಾಜ್ಯ ಮಹಿಳಾ ಮುಖ್ಯ ಶಿಕ್ಷಕಿಯರ ಒಕ್ಕೂಟ ಮತ್ತು ರಾಷ್ಟ್ರೀಯ ಮಹಿಳಾ ದೌರ್ಜನ್ಯ ನಿಯಂತ್ರಣ ದಳದಿಂದ ರಾಜ್ಯಾದ್ಯಂತ ಸಮೀಕ್ಷೆ ನಡೆಸಿ ಎಲ್ಲೆಲ್ಲಿ ಶಿಕ್ಷಕರಿಯರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದಿವೆ ಎಂಬ ವರದಿ ಸಿದ್ಧಪಡಿಸಿತ್ತು. ವರದಿಯನ್ನು ರಾಷ್ಟ್ರೀಯ ಶಿಕ್ಷಣ ಆಡಳಿತ ಸುಧಾರಣೆ ಇಲಾಖೆ ಮತ್ತು ಪ್ರಾದೇಶಿಕ ತನಿಖಾದಳವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಪ್ರಕರಣಗಳ ತನಿಖೆ ನಡೆಸಬೇಕು ಮತ್ತು ಶಿಕ್ಷಕಿಯರ ಗೌರವದ ದೃಷ್ಟಿಯಿಂದ ತನಿಖೆಯಲ್ಲಿ ಗೌಪ್ಯತೆ ಕಾಪಾಡಿಕೊಳ್ಳಬೇಕೆಂದು ಪತ್ರದಲ್ಲಿ ಉಲ್ಲೇಖಿಸಿ ತಿಳಿಸಿದೆ.ಈ ರೀತಿ ಶಿಕ್ಷಕರಿಯರ ಮೇಲೆ ಕಿರುಕುಳ ನಡೆಯುತ್ತಿರುವದು ಆಘಾತಕಾರಿ ವಿಷಯ ರಾಜ್ಯ ಸರ್ಕಾರ, ಶಿಕ್ಷಣ ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸ ಬೇಕಾಗಿದೆ.ಮುಚ್ಚಿ ಹಾಕುವ ಪ್ರಯತ್ನ ಮಾಡಬಾರದು ಶಿಕ್ಷಕಿಯರ ರಕ್ಷಣೆ ಕೊಡುವುದು ಕೇವಲ ಸರ್ಕಾರದ ಜವಾಬ್ದಾರಿ ಅಷ್ಟೇ ಅಲ್ಲ ನಮ್ಮೆಲ್ಲರ ಜವಾಬ್ದಾರಿಯು ಆಗಿದೆ. ರಾಜ್ಯ ಸರ್ಕಾರ ಶಿಕ್ಷಣ ಆಡಳಿತ ಸುಧಾರಣೆ ಮತ್ತು ತನಿಖಾ ದಳದ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ರಕ್ಷಣೆ ಒದಗಿಸಬೇಕು.