ಬಸ್ ದರ ಹೆಚ್ಚಳ ತೆಗನೂರ ಖಂಡನೆ
ಬಸ್ ದರ ಹೆಚ್ಚಳ ತೆಗನೂರ ಖಂಡನೆ
ಕಲಬುರಗಿ: ಶಕ್ತಿ ಯೋಜನೆ ಮೂಲಕ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಅನುಕೂಲ ಮಾಡಿದ್ದ ಕಾಂಗ್ರೆಸ್ ಸರ್ಕಾರ, ಶಕ್ತಿ ಯೋಜನೆಯಿಂದ ಯಾವುದೇ ನಷ್ಟವಿಲ್ಲ. ಯೋಜನೆ ಜಾರಿಗೆ ಬಂದ ನಂತರ ಸಾರಿಗೆ ನಿಗಮಗಳ ವಹಿವಾಟು ಹೆಚ್ಚಾಗಿದೆ ಎಂದು ಹೇಳುತ್ತಲೇ ನಿಗಮದ ನೌಕರರಿಗೆ ನೀಡಬೇಕಾದ ಸಾವಿರಾರು ಲಕ್ಷ ಸಂಬಳ ಬಾಕಿ ಉಳಿಸಿಕೊಂಡಿತ್ತು. ಈ ಬಾಕಿ ತೀರಿಸಲು ಮರಳಿ ಜನರ ಜೇಬಿಗೆ ಕೈ ಹಾಕಲು ಸರ್ಕಾರ ಮುಂದಾಗಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿಯ ಉತ್ತರ ಕರ್ಮಾಟಕ ವಕ್ತಾರ ಆನಂದ ತೆಗನೂರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಇಂತಹ ಜನವಿರೋಧಿ ಅದರಲ್ಲೂ ಸಾಮಾನ್ಯ ಜನರಿಗೆ ಹೆಚ್ಚು ಹೊರೆಯಾಗುವ ನಿರ್ಧಾರವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಖಂಡಿಸುತ್ತದೆ ಮತ್ತು ಸರ್ಕಾರವು ಆಡಳಿತದ ಎಲ್ಲಾ ಹಂತಗಳಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಂಡು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಜನಪರ ಆಡಳಿತ ನೀಡಬೇಕು ಹಾಗೂ ಈ ಕೂಡಲೇ ಪ್ರಯಾಣ ದರ ಹೆಚ್ಚಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ಎಂದರು.ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಆಗಿದ್ದಕ್ಕೆ ಈ ರೀತಿ ಎಲ್ಲ ದರ ಹೆಚ್ಚಳ ಮಾಡುತ್ತಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬರಲು ಬರೀ ಮಹಿಳೆಯರಷ್ಟೇ ಮತ ಚಲಾಯಿಸಿದ್ದಾರಾ? ನಾವು ಇವರಿಗೆ ಮತ ಹಾಕಿಲ್ಲವೇ? ಕೇವಲ ಮಹಿಳೆಯರಿಗಷ್ಟೇ ಉಚಿತ ಕೊಟ್ಟರೆ ನಾವು ಏನು ಮಾಡಬೇಕು? ನಮ್ಮ ಕಡೆ ತೆಗೆದುಕೊಂಡು ಅವರಿಗೆ ಕೊಡುತ್ತಿದ್ದಾರೆ. ಇದು ಅಳಿಯ ಅಲ್ಲ ಮಗಳ ಗಂಡ ಎನ್ನುವಂತಾಗಿದೆ. ಈ ಸರ್ಕಾರ ಸರಿ ಇಲ್ಲ. ಇದರಿಂದ ಮನೆಯಲ್ಲಿ ಮಹಿಳೆಯರು ನಮ್ಮ ಮಾತು ಕೇಳದ ಸ್ಥಿತಿ ನಿರ್ಮಾಣ ಆಗಿದೆ'' ಎಂದು ಕಿಡಿಕಾರಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ತುಂಬಾ ಅನುಕೂಲವಾಗಿದೆ.ಹೊಲಿಗೆ ಯಂತ್ರ, ದಿನನಿತ್ಯ ಉಪಯೋಗಕ್ಕೆ ಮನೆ ವಸ್ತುಗಳನ್ನು ಖರೀದಿಸಿದ್ದೇವೆ. ಆದರೆ, ಈಗ ಏಕಾಏಕಿ ಬಸ್ ದರ ಹೆಚ್ಚಳ ಮಾಡುವುದರಿಂದ ದಿನನಿತ್ಯ ದುಡಿಯುವ ವರ್ಗದವರಿಗೆ ತುಂಬಾ ತೊಂದರೆ ಆಗುತ್ತದೆ. ಹಾಗಾಗಿ, ಮೊದಲಿನ ದರವನ್ನೆ ಮುಂದುವರಿಸಲಿ ಎಂದು ಅವರು ಆಗ್ರಹಿಸಿದರು.
ರಾಜ್ಯ ಸರ್ಕಾರ ಇಷ್ಟು ದಿನ ಪೆಟ್ರೋಲ್,ಡೀಸೆಲ್,ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿತ್ತು. ಆದರೆ, ಈಗ ಬಸ್ ದರ ಏರಿಸಿ ಪುರುಷರ ಹಣವನ್ನು ಮಹಿಳೆಯರಿಗೆ ಕೊಡುತ್ತಿರುವುದು ಸರಿಯಲ್ಲ. ದುಡಿಯುವ ಕೈಗಳಿಗೆ ಕೆಲಸ ಕೊಡಿ. ಅವರೇ ನಿಮಗೆ ತೆರಿಗೆ ರೂಪದಲ್ಲಿ ಹಣ ಪಾವತಿಸುತ್ತಾರೆ. ಅದನ್ನು ಬಿಟ್ಟು ಒಂದು ಕಡೆ ಕೊಟ್ಟು, ಒಂದು ಕಡೆ ಕಿತ್ತುಕೊಳ್ಳುವುದು ಸರಿ ಅಲ್ಲ. ಕೂಡಲೇ ಪುಕ್ಕಟೆ ಯೋಜನೆಗಳನ್ನು ನಿಲ್ಲಿಸಬೇಕು. ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಅವರು ಒತ್ತಾಯಿಸಿದರು.