2024 ರ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಉದ್ಘಾಟನಾ ಸಮಾರಂಭ

2024 ರ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಉದ್ಘಾಟನಾ ಸಮಾರಂಭ

    2024 ರ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಉದ್ಘಾಟನಾ ಸಮಾರಂಭ

 ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಕಲಬುರಗಿಯಲ್ಲಿ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಯವರು ಉದ್ಘಾಟಿಸಿದರು. 2023-24 ರಲ್ಲಿ ಸ್ನಾತಕ/ಸ್ನಾತಕೋತ್ತರ ಮತ್ತು ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು 06 ತಿಂಗಳ ಅವಧಿಯವರೆಗೆ ಉದ್ಯೋಗ ಹೊಂದಿಲ್ಲದವರು ನೊಂದಣಿ ಮಾಡಿಕೊಳ್ಳಬೇಕು. ಪದವಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ: 3000/- ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ:1500/- ನಿರುದ್ಯೋಗ ಭತ್ಯೆ ಪಡೆದುಕೊಳ್ಳಬೇಕೆಂದು ಪ್ರಾಂಶುಪಾಲರು ಮಾತನಾಡಿದರು. ಯುವನಿಧಿ ವಿಶೇಷ ನೊಂದಣಿ ಅಭಿಯಾನವನ್ನು ದಿನಾಂಕ: 06-01-2025 ರಿಂದ 20-01-2025 ರವರೆಗೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಆದ ಶ್ರೀ ಸತೀಶಕುಮಾರ ಹಾಗೂ ಕಲಬುರಗಿಯ ಯಂಗ್ ಪ್ರೊಫೆಷನ್ ಮಾದರಿ ವೃತ್ತಿ ಕೇಂದ್ರದ ಶ್ರೀ ಪಿಯುಷ್ ಪರಿಹಾರ ಅವರು ಅತಿಥಿಗಳಾಗಿ ಆಗಮಿಸಿದ್ದರು. ಡಾ.ಸುಜಾತಾ ದೊಡ್ಮನಿ ಅವರು ಅತಿಥಿ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ವಂದನಾರ್ಪಣೆ ಡಾ.ಭಾಗ್ಯಲಕ್ಷಿö್ಮ ವಹಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ರಾಜಕುಮಾರ ಸಲಗರ, ಡಾ.ದೌಲಪ್ಪ ಬಿ.ಹೆಚ್, ಡಾ.ಮಹಾಂತೇಶ ಸ್ವಾಮಿ, ಡಾ.ಶ್ರೀಮಂತ ಹೋಳ್ಕರ್, ಡಾ.ನಾಗಪ್ಪ ಗೋಗಿ, ಡಾ.ರಾಬಿಯಾ ಇಫ್ಫತ್ ಡಾ.ಶಾಮಲಾ ಸ್ವಾಮಿ, ಡಾ.ಅಮಿತ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಬೋಧಕ/ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.