ಬಸವೇಶ್ವರ ಆಸ್ಪತ್ರೆಯಲ್ಲಿ ಶಾಲಾ ಸಂಜೀವಿನಿ ಯೋಜನೆ ಅಡಿಯಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬಸವೇಶ್ವರ ಆಸ್ಪತ್ರೆಯಲ್ಲಿ ಶಾಲಾ ಸಂಜೀವಿನಿ ಯೋಜನೆ ಅಡಿಯಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವಿಶೇಷ ಆರೋಗ್ಯ ಭಾಗ್ಯ ಯೋಜನೆಯಾದ ಉಚಿತ ಆರೋಗ್ಯ ಭಾಗ್ಯ ಶಾಲಾ ಸಂಜೀವಿನಿ ಯೋಜನೆ ಅಡಿಯಲ್ಲಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಸೀಫ್ ಗಂಜ್ ನ ಮಕ್ಕಳ ಸಂಪೂರ್ಣ ಉಚಿತ ಆರೋಗ್ಯ ತಪಾಸಣೆ ಮಾಡಿ ಅವರಿಗೆ ಬೇಕಾದ ಸಲಹೆ ಮತ್ತು ಸಂಸ್ಥೆಯಿಂದ ಉಚಿತವಾಗಿ ಔಷಧಿಗಳನ್ನು ವಿತರಿಸಲಾಯಿತು. 44 ವಿದ್ಯಾರ್ಥಿಗಳು ಈ ಶಿಬಿರದ ಲಾಭ ಪಡೆದುಕೊಂಡರು. ಈ ಶಿಬಿರದಲ್ಲಿ ಬಸವೇಶ್ವರ ಆಸ್ಪತ್ರೆಯ ಸಂಚಾಲಕರು ಆಡಳಿತ ಮಂಡಳಿ ಸದಸ್ಯರಾದ ಡಾ ಕಿರಣ್ ದೇಶಮುಖ್, ಡಾ ಶರಣಬಸಪ್ಪ ಹರವಾಳ, ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ ಆನಂದ ಗಾರಂಪಳ್ಳಿ ವೈದ್ಯರಾದ ಡಾ ಬಸವರಾಜ ಪಾಟೀಲ,ಡಾ ವಿಜಯಶ್ರೀ ಮಠದ, ಡಾ ಅಪೂರ್ವ ಹಾಜರಿದ್ದರು..