ಮಹಾದೇವಿ ಬೀಮನಹಳ್ಳಿ ಕಲಾ ರತ್ನ ಪ್ರಶಸ್ತಿಗೆ ಆಯ್ಕೆ
ಮಹಾದೇವಿ ಬೀಮನಹಳ್ಳಿ ಕಲಾ ರತ್ನ ಪ್ರಶಸ್ತಿಗೆ ಆಯ್ಕೆ
ಚಿತ್ತಾಪುರ ತಾಲೂಕಿನ ಭೀಮನಹಳ್ಳಿ ಗ್ರಾಮದ ಜಾನಪದ ಕಲಾವಿದೆಯಾದ ಮಹಾದೇವಿ ಶರಣಪ್ಪ ಹೊಸಮನಿ ಅವರು ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿ ಆಯ್ಕೆಯಾಗಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ರಾಜ್ಯಧ್ಯಕ್ಷ ವಿಜಯಕುಮಾರ್ ಸೋನಾರೆ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ತಿಳಿಸಿದ್ದಾರೆ
ಜನವರಿ 11 ಮತ್ತು 12 ರಂದು ಬೀದರ್ ದಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ದ್ವಿತೀಯ ವಾರ್ಷಿಕೋತ್ಸವ ಅಂಗವಾಗಿ ವಿಭಾಗ ಮಟ್ಟದ ತತ್ವಪದ ಸಮಾವೇಶ ಹಾಗೂ ಭಜನಾ ಸ್ಪರ್ಧೆ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಹೇಳಿದರು.