ಜೇವರ್ಗಿ ಬಂದಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ : ಜಿಲ್ಲಾಧ್ಯಕ್ಷ ಸಾಯಬಣ್ಣ ಪೂಜಾರಿ

ಜೇವರ್ಗಿ ಬಂದಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ : ಜಿಲ್ಲಾಧ್ಯಕ್ಷ ಸಾಯಬಣ್ಣ ಪೂಜಾರಿ

ಜೇವರ್ಗಿ ಬಂದಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ : ಜಿಲ್ಲಾಧ್ಯಕ್ಷ ಸಾಯಬಣ್ಣ ಪೂಜಾರಿ 

 ಕಲಬುರಗಿ ಜೇವರ್ಗಿ ಪಟ್ಟಣದ ವಿದ್ಯಾರ್ಥಿನಿ ಮುಸ್ಲಿಂ ಯುವಕನ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಸಂತ್ರಸ್ಥರ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಡೆಯಲಿದ್ದು ಈ ಪ್ರಕರಣವನ್ನು ಖಂಡಿಸಿ ನಾಳೆ ನಡೆಯಲಿರುವ ದಿನಾಂಕ 16 /1/2025ರಂದು ಜೆವರ್ಗಿ ಸಂಪೂರ್ಣ ಬಂದಗೆ ಕರೆಕೊಡಲಾಗಿದ್ದು ಇದಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಕಲ್ಬುರ್ಗಿ ಜಿಲ್ಲಾಧ್ಯಕ್ಷರಾದ ಸಾಯಬಣ್ಣ ಪೂಜಾರಿ ಅವರು ಜೇವರ್ಗಿ ಬಂದಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು ಅದೇ ರೀತಿಯಾಗಿ ಸಂತ್ರಸ್ತ ವಿದ್ಯಾರ್ಥಿನಿಯು ಕುಟುಂಬದ ಮಾನ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದು ಇಡೀ ನಾಗರಿಕ ಸಮುದಾಯ ತಲೆತಗ್ಗಿಸುವಂತಹ ಘಟನೆ ಇದು ಆಗಿದ್ದು ಈ ಘಟನೆಗೆ ಕಾರಣವಾದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಹಾಗೂ ಅನ್ಯಾಯ ಕೊಳಗದ ಕುಟುಂಬಕ್ಕೆ ಕಾನೂನಾತ್ಮಕವಾಗಿ ಸೂಕ್ತ ರಕ್ಷಣೆ ನೀಡಬೇಕು ಮತ್ತು ನೊಂದ ಕುಟುಂಬಕ್ಕೆ ಸುಮಾರು 50 ಲಕ್ಷ ರೂಪಾಯಿಯ ಪರಿಹಾರ ಧನವನ್ನು ರಾಜ್ಯ ಸರ್ಕಾರ ಘೋಷಿಸಬೇಕು ಹಾಗೂ ಮೃತ ವಿದ್ಯಾರ್ಥಿನಿಯ ಸಹೋದರನಿಗೆ ಸರ್ಕಾರದ ವತಿಯಿಂದ ಉದ್ಯೋಗ ಕೊಡಿಸಬೇಕು ಎಂದು ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷರಾದ ಸಾಯಬಣ್ಣ ಪೂಜಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು