ಬಸವಣ್ಣನವರ ಪ್ರತಿಮೆಗೆ ಅವಮಾನ: ಖಂಡನೆ
ಬಸವಣ್ಣನವರ ಪ್ರತಿಮೆಗೆ ಅವಮಾನ: ಖಂಡನೆ
ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಹತ್ತಿರ ಬಸವಣ್ಣನವರ ಮೂರ್ತಿಗೆ ಅಪಮಾನ ಮಾಡಲಾಗಿರುವ ಘಟನೆ ಉಗ್ರವಾಗಿ ಖಂಡಿಸುತ್ತೇವೆ ಎಂದು ಪ್ರಗತಿಪರ ಚಿಂತಕರಾದ ಸಂಗಮೇಶ ಎನ್ ಜವಾದಿ ನುಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮಾನತೆಯ ಹರಿಕಾರ ವಿಶ್ವ ಗುರು ಬಸವಣ್ಣನವರ ಮೂರ್ತಿಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಆದಷ್ಟು ಬೇಗನೆ ಬಂಧಿಸಬೇಕು. ಅವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಈ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ಪೋಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.