ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಹಿತ್ಯ ಸಂಗೀತ ಕಲೆಯ ಬಗ್ಗೆ ಆಸಕ್ತಿ ವಹಿಸಿದರೆ ಜೀವನಾನುಭವ ದೊರೆಯುತ್ತದೆ. ಡಾ.ಹೊನ್ಕಲ್
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಹಿತ್ಯ ಸಂಗೀತ ಕಲೆಯ ಬಗ್ಗೆ ಆಸಕ್ತಿ ವಹಿಸಿದರೆ ಜೀವನಾನುಭವ ದೊರೆಯುತ್ತದೆ. ಡಾ.ಹೊನ್ಕಲ್
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಹಿತ್ಯ ಸಂಗೀತ ಕಲೆಯ ಬಗ್ಗೆ ಆಸಕ್ತಿ ವಹಿಸಿದರೆ ಅವರ ಜೀವನಾನುಭವ ಹೆಚ್ಚುತ್ತದೆ. ಆ ಮೂಲಕ ವಿದ್ಯಾರ್ಥಿ ದಿಸೆಯಲ್ಲಿ ಗಟ್ಟಿತನ ಬರುತ್ತದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಸಿದ್ಧರಾಮ ಹೊನ್ಕಲ್ ಅವರು ಸತ್ಯಂ ಕಾಲೇಜಿನಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಅವರ ಬಗೆಗಿನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆದು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಕರೆ ನೀಡಿದರು.
ಕಲಬುರ್ಗಿಯ ಸತ್ಯಂ ಪಿಯು ಕಾಲೇಜಿನಲ್ಲಿ ರಾಷ್ಟ್ರ ಕವಿ ಕುವೆಂಪು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಚಕೋರ ಸಾಹಿತ್ಯ ವಿಚಾರ ವೇದಿಕೆ ಕಲಬುರ್ಗಿ ಅಡಿಯಲ್ಲಿ ನಡೆಯಿತು.ಕುವೆಂಪು ಅವರ ಕುರಿತು ಎನ್.ವಿ.ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ.ಮಲ್ಲಿನಾಥ ತಳವಾರ ಅವರು ವಿಶೇಷ ಉಪನ್ಯಾಸ ನೀಡಿ ಕುವೆಂಪು ಅವರಂತಹ ಮಹಾನ್ ವ್ಯಕ್ತಿ ಆಗಲು ವಿದ್ಯಾರ್ಥಿಗಳು ಪಣ ತೊಡಬೇಕು.ವಿದ್ಯಾರ್ಥಿಗಳು ಭತ್ತ ತುಂಬುವ ಚೀಲ ಆಗಬಾರದು.ಭತ್ತ ಬೆಳೆಯುವ ಗದ್ದೆ ಆಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ.ಚಂದ್ರಕಲಾ ಬಿದರಿ ಅವರು ಮಾತನಾಡಿ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಗುರಿಗಳನ್ನು ಹೊಂದಿರಬೇಕು. ಉಜ್ವಲ್ ಭವಿಷ್ಯ ರೂಪಿಸಿಕೊಳ್ಳಲು ತಿಳಿಸಿದರು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಪ್ರಾಚಾರ್ಯರು ಆದ ಬಿ.ಎಚ್.ನಿರಗುಡಿಯವರು ಇಂತಹ ಮಹಾನ್ ಕವಿ ಕುವೆಂಪು ಕುರಿತು ನಮ್ಮ ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಟ್ಟ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಈ ಚಕೋರ ವೇದಿಕೆಯದು ಅರ್ಥಪೂರ್ಣವಾದ ಕೆಲಸ ಎಂದು ಶ್ಲಾಘಿಸಿದರು..ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾನ ಬೆಳಗಲು ಸಹಕಾರಿ ಎಂದು ತಿಳಿಸಿ ಪ್ರಥಮ ಜ್ಞಾನಪೀಠ ಪ್ರಶಸ್ತಿ ಪಡೆದ ಕವಿ ಕುವೆಂಪು ಅವರ ವಿಶ್ವಮಾನವ ಸಂದೇಶದ ಕುರಿತು ಮಾತನಾಡಿದರು.ವಿಶ್ರಾಂತ ಸಮಾಜಶಾಸ್ತ್ರಪ್ರಾಧ್ಯಾಪಕರಾದ ಎಸ್.ಎಲ್ ಪಾಟೀಲ್ ಅವರು ತಮ್ಮ ಅನುಭವ ಹಂಚಿಕೊಂಡು ಕೊನೆಯಲ್ಲಿ ವಂದಿಸಿದರು. ಆರಂಭದಲ್ಲಿ ವೇದಿಕೆಯ ಮೇಲಿದ್ದ ಕವಿ ಕುವೆಂಪು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸಿಬ್ಬಂದಿ ಭಾಗವಹಿಸಿದ್ದರು.