ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಬಲಪಡಿಸಲು ಪ್ರಸ್ತುತ ಆಡಳಿತ ಮಂಡಳಿ ಸದಾಸಿದ್ಧ ಶಶೀಲ್ ಜಿ ನಮೋಶಿ

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಬಲಪಡಿಸಲು ಪ್ರಸ್ತುತ ಆಡಳಿತ ಮಂಡಳಿ ಸದಾಸಿದ್ಧ ಶಶೀಲ್ ಜಿ ನಮೋಶಿ

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಬಲಪಡಿಸಲು ಪ್ರಸ್ತುತ ಆಡಳಿತ ಮಂಡಳಿ ಸದಾಸಿದ್ಧ ಶಶೀಲ್ ಜಿ ನಮೋಶಿ 

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯನ್ನು ಹಾಗೂ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯವನ್ನು ಉನ್ನತೀಕರಿಸಲು ಪ್ರಸ್ತುತ ಆಡಳಿತ ಮಂಡಳಿ ಸದಾ ಕಂಕಣ ಬದ್ಧರಾಗಿ ಕೆಲಸ ಮಾಡುತ್ತಿದ್ದು ಈಗಾಗಲೇ ಹಲವಾರು ಯೋಜನೆಗಳನ್ನು ಹಾಕಿಕೊಂಡು ಅದರಂತೆ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಹೇಳಿದರು 

ಅವರು ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಾರಂಭಿಸಿರುವ ನೂತನ ವಸತಿಗೃಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಈಗಾಗಲೇ ನಮ್ಮ ಭಾಗದ ಸಾರ್ವಜನಿಕರ ಆರೋಗ್ಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅನೇಕ ಉಚಿತ ಆರೋಗ್ಯ ತಪಾಸಣಾ ಶಿಬಿರ, ಶಾಲಾ ಮಕ್ಕಳಿಗಾಗಿ ಶಾಲಾ ಸಂಜೀವಿನಿ ಯಂತಹ ವಿನೂತನ ಯೋಜನೆಗಳನ್ನು ಸಂಸ್ಥೆಯು ಜಾರಿಗೆ ತಂದು ಕಾರ್ಯನಿರ್ವಹಿಸುತ್ತಿದ್ದು ಇವುಗಳು ಸಾರ್ವಜನಿಕರಿಂದ ಪ್ರಶಂಸೆ ಪಡೆದಿವೆ ಎಂದು ಹೇಳಿದರು. ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಡಾ ಆಕಾಶ ಶಂಕರ್ ಅವರು ಶಾಲಾ ಸಂಜೀವಿನಿಯಂತ ಯೋಜನೆ ಜಾರಿ ಮಾಡಿ ನಮ್ಮ ಇಲಾಖೆಗೆ ಸಂಸ್ಥೆಯು ವಿಶೇಷ ಕೊಡುಗೆ ನೀಡಿದೆ.ಶಾಲಾ ಮಕ್ಕಳ ಆರೋಗ್ಯಕ್ಕಾಗಿ ಈ ಯೋಜನೆ ತುಂಬಾ ಅನೂಕೂಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು 

ಇದೆ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ನೂತನ ವಾಹನ ಉದ್ಘಾಟನೆ ಹಾಗೂ ಆಸ್ಪತ್ರೆಯ ನೂತನ ಲಾಂಛನ ಬಿಡುಗಡೆಯನ್ನು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ನೇರವೇರಿಸಿದರು. ನಂತರ ಮಾತನಾಡಿದ ರಾಜಾ ಭಿ ಭೀಮಳ್ಳಿಯವರು ಪ್ರಸ್ತುತ ಆಡಳಿತ ಮಂಡಳಿಯು ನಮ್ಮ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವಾರು ಹೊಸ ಹೊಸ ಕೊರ್ಸಗಳನ್ನು ಆರಂಭಿಸಿ ನಮ್ಮ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಪಯೋಗವಾಗಲು ಸದಾ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಹೇಳಿದರು 

ಈ ಸಂದರ್ಭದಲ್ಲಿ ಬಸವೇಶ್ವರ ಆಸ್ಪತ್ರೆಯ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಡಾ ಕಿರಣ್ ದೇಶಮುಖ್, ಆಡಳಿತ ಮಂಡಳಿ ಸದಸ್ಯರಾದ ಡಾ ಮಹಾದೇವಪ್ಪ ರಾಂಪೂರೆ ಡಾ ನಾಗೇಂದ್ರ ಮಂಠಾಳೆ, ಸಾಯಿನಾಥ ಪಾಟೀಲ್,ಡಾ ಅನೀಲಕುಮಾರ ಪಟ್ಟಣ, ನಾಗಣ್ಣ ಘಂಟಿ ಹಾಗೂ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ ಶರಣಗೌಡ ಪಾಟೀಲ್, ವೈದ್ಯಕೀಯ ಅಧೀಕ್ಷಕರಾದ ಡಾ ಆನಂದ ಗಾರಂಪಳ್ಳಿ ವಸತಿ ಗ್ರಹದ ಮುಖ್ಯಸ್ಥರಾದ ಡಾ ಸುನೀಲ್ ದೇಶಮುಖ್, ಡಾ ಕವಿತಾ ಸಲಗರ, ಸಂಸ್ಥೆಯ ವಿಶೇಷ ಅಧಿಕಾರಿ ಡಾ ಪರಮೇಶ ಬಿರಾದಾರ ಹಾಗೂ ಇನ್ನಿತರರು ಉಪಸ್ಥಿತರಿದ್ದರು