ಜೈ ಕನ್ನಡಿಗರ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಬಾಸಗಿ ನೇತೃತ್ವದಲ್ಲಿ ಡಿಸಿ ಕಚೇರಿಯ ಎದುರು ಬೃಹತ್ ಪ್ರತಿಭಟನೆ
ಜೈ ಕನ್ನಡಿಗರ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಬಾಸಗಿ ನೇತೃತ್ವದಲ್ಲಿ ಡಿಸಿ ಕಚೇರಿಯ ಎದುರು ಬೃಹತ್ ಪ್ರತಿಭಟನೆ
ಕಲಬುರಗಿ ನಗರದ ಮಹಾನಗರ ಪಾಲಿಕೆಯ ಮಹಾಪೌರರಾದ ಯಲ್ಲಪ್ಪ ನಾಯಕೋಡಿ ಅವರು ನಗರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲವೇಂದು ಆರೋಪಿಸಿ ನಗರದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜೈ ಕನ್ನಡಿಗರ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಬಾಸಗಿ ಅವರ ನೇತೃತ್ವದಲ್ಲಿ ನಗರದ ಡಿಸಿ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಸಿದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತರು ಪಾಲಿಕರ ಹಾಗೂ ಮೆಯರ್ ವಿರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ರಸ್ತೆ ನಿರ್ಮಾಣ, ದುರಸ್ಥಿಕರಣ, ಚರಂಡಿ, ಒಳಚರಂಡಿ ಇನ್ನು ಮುಂತಾದ ಕಾಮಗಾರಿಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಮಹಾನಗರ ಪಾಲಿಕೆ ಮೆಯರ್ ಯಲ್ಲಪ್ಪ ನಾಯ್ಕೋಡಿ ಅವರು ವಿಫಲರಾಗಿದ್ದಾರೆ. ಅಲ್ಲದೆ ಪಾಲಿಕೆಯ ಕಛೇರಿಯಲ್ಲಿರುವ ತಮ್ಮ ಕೊಠಡಿಯಲ್ಲಿ ಕುಳಿತುಕೊಂಡು ಮಂಜೂರಾಗಿರುವ ಕಾಮಗಾರಿಗಳ ಗುತ್ತಿಗೆದಾರರ ಬಳಿ ಕಮಿಷನ್ ಪಡೆದುಕೊಂಡು ಯಾವುದೇ ರೀತಿಯ ಅಭಿವೃದ್ಧಿ ಕಾಮಗಾರಿ ಮಾಡುತ್ತಿಲ್ಲ ಎಂದು ದೂರಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಹುಸೇನ, ಮಲ್ಲು ಆಲಗೂಡ, ನವೀನ ದುಮ್ಮನಸೂರ, ಸಂಜು ಮಾಳಗಿ, ಭೀಮಶಾ ಧರಣಿ, ಅರ್ಜುನ ಧರಣಿ, ಶರಣು ಸೇರಿದಂತೆ ಇನ್ನೂ ಹಲವಾರು ಕಾರ್ಯಕರ್ತಕರು ಉಪಸ್ಥಿತರಿದ್ದರು.