ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜಯಂತಿ ಆಚರಣೆ
ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜಯಂತಿ ಆಚರಣೆ
ಡೆಲ್ಲಿ ಪಬ್ಲಿಕ್ ಸ್ಕೂಲ್ ಬೆಂಗಳೂರು ಉತ್ತರ ವಲಯಕರ್ನಾಟಕ ಸರ್ವೋದಯ ಮಂಡಲ, ಬೆಂಗಳೂರುಸಂಯುಕ್ತ ಆಶ್ರಯದಲ್ಲಿನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜಯಂತಿ ಆಚರಣೆ ಹಾಗೂ ಗಾಂಧೀಜಿಯವರ ವಿಚಾರಧಾರೆ ಪ್ರಸ್ತುತಿ
ರಾಷ್ಟ್ರೀಯ ಮಹಾನ್ ಹೋರಾಟಗಾರರಾದ " ನೇತಾಜಿ ಸುಭಾಷ್ ಚಂದ್ರ ಬೋಸ್‍ರವರ 128ನೇ ಜಯಂತಿ ಆಚರಣೆ ಹಾಗೂ ಗಾಂಧೀಜಿಯವರ ವಿಚಾರಧಾರೆ ಪ್ರಸ್ತುತಿ" ಕಾರ್ಯಕ್ರಮವನ್ನು ಡೆಲ್ಲಿ ಪಬ್ಲಿಕ್ ಸ್ಕೂಲ್ ಬೆಂಗಳೂರು ಉತ್ತರ ವಲಯದಲ್ಲಿ ಅತ್ಯಂತ ಸಂಭ್ರಮದಿಂದ ನಾಡಗೀತೆಯೊಂದಿಗೆ ಪ್ರಾರಂಭಿಸಲಾಯಿತು.
ದೇಶಭಕ್ತಿ ಗೀತೆಯ ನಂತರ ಮುಖ್ಯ ಅತಿಥಿಗಳು ಮಹಾತ್ಮ ಗಾಂಧೀಜಿ ಹಾಗೂ ಸುಭಾಷ್ ಸುಭಾಷ್ ಚಂದ್ರ ಬೋಸ್ ರವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸುಮತಿ ಸಗರ್ ರವರು ಸ್ವಾಗತ ಭಾಷಣವನ್ನು ಮಾಡಿದ ನಂತರ ವಿದ್ಯಾರ್ಥಿಗಳಿಂದ ದೇಶಾಭಿಮಾನವನ್ನು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.ಇದರ ಅಂಗವಾಗಿ ವಿದ್ಯಾರ್ಥಿಗಳು ಗಾಂಧೀಜಿಯವರ ಬಾಲ್ಯದಲ್ಲಿ ನಡೆದ ಘಟನೆಗಳು ಹಾಗೂ ಸ್ವದೇಶಿಚಳುವಳಿಯನ್ನು ಕುರಿತ ನಾಟಕವನ್ನು ಅಭಿನಯಿಸಿದರು. ಅಲ್ಲದೆ ಅಸ್ಪೃಶ್ಯತೆಯನ್ನು ಕುರಿತ ಗಾಂಧೀಜಿಯವರ ಚಿಂತನೆಯನ್ನು ಕುರಿತು ಮಾತನಾಡಿದರು.
ಮುಖ್ಯ ಅತಿಥಿಗಳಾದ ಡಾII ಹೆಚ್. ಸುರೇಶ್ (ಅಧ್ಯಕ್ಷರು, ಕರ್ನಾಟಕ ಸರ್ವೋದಯ ಮಂಡಲ) ಹಾಗೂ ಡಾII ಗುರುರಾಜ ಪೋಶೆಟ್ಟಿಹಳ್ಳಿ (ಅಧ್ಯಕ್ಷರು, ಕರ್ನಾಟಕ ಸರ್ವೋದಯ ಮಂಡಲ, ಬೆಂ.ನ.ಜಿಲ್ಲೆ)
ಯವರು ಗಾಂಧೀಜಿಯವರ ಕುರಿತ ವಿಚಾರಧಾರೆಯನ್ನು ಸರಳಸುಂದರ ಶೈಲಿಯಲ್ಲಿ ಪ್ರಸ್ತುತಪಡಿಸಿದರು. ಇದರಿಂದ ವಿದ್ಯಾರ್ಥಿಗಳಲ್ಲಿ ಮಹಾನ್ ಹೋರಾಟಗಾರರ ಬಗ್ಗೆ ಅರಿವು ಮೂಡುವುದರ ಜೊತೆಗೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡರು.