ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ
ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ
ಕಲಬುರಗಿ: ನಗರದ ಡಾ.ಎಸ್.ಎಮ್.ಪಂಡಿತ್ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯಸಭಾ ಸದಸ್ಯರು ಹಾಗೂ ಬಿಜೆಪಿ ಓಬಿಸಿ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಕೆ. ಲಕ್ಷ್ಮಣ ಅವರಿಗೆ ಬಿಜೆಪಿ ನಗರ ಓಬಿಸಿ ಘಟಕದಿಂದ ಕಾರ್ಯಕ್ರಮದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಚಂದು ಪಾಟೀಲ್, ಬಿಜೆಪಿ ಓಬಿಸಿ ನಗರಾಧ್ಯಕ್ಷರಾದ ದೇವೇಂದ್ರ ದೇಸಾಯಿ ಕಲ್ಲೂರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅವ್ವಣ್ಣ ಮ್ಯಾಕೇರಿ, ಕಾಡಾ ಮಾಜಿ ಅಧ್ಯಕ್ಷರಾದ ಶರಣಪ್ಪ ತಳವಾರ, ಶರಣಗೌಡ, ಈರಣ್ಣ ಸಿ. ಹಡಪದ ಸಣ್ಣೂರ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು