ಕಲಬುರಗಿಯ ಜಯದೇವ ಹೃದ್ರೋಗ ಆಸ್ಪತ್ರೆಗೆ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಭೇಟಿ

ಕಲಬುರಗಿಯ ಜಯದೇವ ಹೃದ್ರೋಗ ಆಸ್ಪತ್ರೆಗೆ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಭೇಟಿ

ಕಲಬುರಗಿಯ ಜಯದೇವ ಹೃದ್ರೋಗ ಆಸ್ಪತ್ರೆಗೆ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಭೇಟಿ 

 ಕಲಬುರಗಿ : ೧೩ ನೇ ಆಗಸ್ಟ್, ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಇಂದು ಭೇಟಿ ನೀಡಿ ಪತ್ರಿಕಾಗೋಷ್ಠಿ ನಡೆಸಿದರು. 

ಜಯದೇವ ಹೃದ್ರೋಗ ಆಸ್ಪತ್ರೆಯು ರೋಗಗಳ ಉತ್ಕೃಷ್ಟ ಸೇವೆಗೆ ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅದರಲ್ಲೂ ವಿಶೇಷವಾಗಿ ಕಲಬುರಗಿ ಜಿಲ್ಲೆಯಲ್ಲಿ ಜನಜನಿತವಾಗಿದೆ ಎಂದರು.

ಆರೋಗ್ಯ ಹಿತದೃಷ್ಟಿಯಿಂದ,‌ ಹೃದಯ ಸಂಬಂಧಿ ಕಾಯಿಲೆಗೆ ಸೂಕ್ತ ಚಿಕಿತ್ಸೆಗಾಗಿ ನಿರ್ಮಿಸಲಾದ ಜಯದೇವ ಆಸ್ಪತ್ರೆಯು ಬರುವ ಸೆಪ್ಟೆಂಬರ್ 17 ಕ್ಕೆ ಅನಾವರಣಗೊಳ್ಳಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರದ ಪ್ರಮುಖ ಪ್ರಣಾಳಿಕೆಗಳಾದ ಆರೋಗ್ಯ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ, ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಸಂಖ್ಯಾತ ಯೋಜನೆಗಳನ್ನು ಕೈಗೊಳ್ಳಲಿದ್ದೇವೆ ಎಂದು ವಿವರಿಸಿದರು. 

ಜಯದೇವ ಹೃದ್ರೋಗ ಸಂಸ್ಥೆಯು ಜನರೊಳಗೆ ಬೆರೆತ ಸಂಸ್ಥೆಯಾಗಿ ರೂಪುಗೊಂಡಿರುವುದಲ್ಲದೆ, ನೂತನ ಆಸ್ಪತ್ರೆಯು ಅದೇ ನಿಟ್ಟಿನಲ್ಲಿ ಸಾಗುವ ‌ಭರವಸೆಯಿದೆ ಎಂದು ರಾಜ್ಯದಾದ್ಯಂತ ಕ್ರೀಯಾಶೀಲ ಸಚಿವರೆಂದೆ ಗುರುತಿಸಿಕೊಂಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.