.ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಕರವೇ ಸ್ವಾಗತ
.ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಕರವೇ ಸ್ವಾಗತ
ಕಲಬುರಗಿ: ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ) ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಶೇಕ ಬಾಲಾಜಿ ಅವರು ಸ್ವಾಗತಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಮುಖ್ಯಮಂತ್ರಿ ಅವರ ನಿರ್ಣಯ ಕನ್ನಡದ ಬಗ್ಗೆ ಅವರಿಗೆ ಇರುವ ಕಾಳಜಿಯ ಪ್ರತೀಕ ಎಂದು ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಅವರು ಕನ್ನಡ ನಾಮಫಲಕ ಕಡ್ಡಾಯಕ್ಕೆ ಕಾಯ್ದೆ ರೂಪಿಸಿ ಜಾರಿಗೊಳಿಸಿದ್ದು ಎಲ್ಲ ನೋವನ್ನು ಮರೆಸಿತು ಎಂದು ಅವರು ಹೇಳಿದ್ದಾರೆ. ಕನ್ನಡಿಗರ ಬದುಕನ್ನು ಹೊರ ರಾಜ್ಯದಿಂದ ಬಂದವರು ಕಿತ್ತುಕೊಳ್ಳುತ್ತಿದ್ದಾರೆ.
ಕರ್ನಾಟಕದ ಉದ್ಯಮ, ಉದ್ಯೋಗಗಳು ಕನ್ನಡಿಗರ ಕೈ ತಪ್ಪುತ್ತಿವೆ. ಇದನ್ನೆಲ್ಲ ನಿಗ್ರಹಿಸಲು ಕಾಯ್ದೆ ರೂಪಿಸಬೇಕಿದೆ. ಸಿದ್ದರಾಮಯ್ಯ ಅವರಿಂದಲೇ ಇದು ಸಾಧ್ಯವಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಅವರು ಪ್ರಕರಣ ವಾಪಸ್ ಪಡೆಯುವ ಮಾತನ್ನು ಉಳಿಸಿಕೊಳ್ಳುತ್ತಾರೆಂಬ ವಿಶ್ವಾಸವಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.