ಬಾಲ್ಯ ವಿವಾಹ ನಿಷೇಧ ಕುರಿತು ಏಳು ವಿವಿಧ ರೀತಿಯ ಪೋಸ್ಟರ್ ಬಿಡುಗಡೆ
ಬಾಲ್ಯ ವಿವಾಹ ನಿಷೇಧ ಕುರಿತು ಏಳು ವಿವಿಧ ರೀತಿಯ ಪೋಸ್ಟರ್ ಬಿಡುಗಡೆ
ಕಲಬುರಗಿ: ನಗರದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪೋಲಿಸ್ ಇಲಾಖೆ ಇವರ ಸಂಯುಕ್ತಆಶ್ರಯದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಕಾನೂನುಗಳ ತಿಳುವಳಿಕೆ ಕಾರ್ಯಕ್ರಮದಲ್ಲಿ ಮಾರ್ಗದರ್ಶಿ ಸಂಸ್ಥೆಯು ಅಕ್ಸೆಸ್ ಟು ಜಸ್ತಿಸ್ ಜಸ್ಟ್ ರೈಟ್ ಫಾರ್ ಚಿಲ್ಡ್ರನ್ ಯೋಜನೆಯ ಬಾಲ್ಯ ವಿವಾಹ ಮುಕ್ತ ಭಾರತ ಕಾರ್ಯಕ್ರಮದ ಪ್ರಯುಕ್ತವಾಗಿ ಬಾಲ್ಯ ವಿವಾಹ ನಿಷೇಧ ಕುರಿತು ಏಳು ವಿವಿಧ ರೀತಿಯ ಪೋಸ್ಟರ್ಗಳನ್ನು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಿಗಿ ಅವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಎಡಿಷನಲ್ ಎಸ್ ಪಿ ಮಹೇಶ್ ಮೇಘಣ್ಣನವರ್, ಯುನಿಸೆಫ್ ಕೊಪ್ಪಳ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಭಟ್, ಜಿಲ್ಲಾ ಕಾರ್ಮಿಕ ಇಲಾಖೆ ಉಪ ಆಯುಕ್ತ ಶರಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳಾ ಅಧಿಕಾರಿ ಶಿವಶರಣಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಂಜುಳಾ ಪಾಟೀಲ್, ಮಾರ್ಗದರ್ಶಿ ಸಂಸ್ಥೆ ನಿರ್ದೇಶಕ ಆನಂದ್ ರಾಜ್, ಸಂಸ್ಕಾರ ಪ್ರತಿಷ್ಠಾನದ ನಿರ್ದೇಶಕ ವಿಠಲ್ ಚಿಕ್ಕಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಸಿಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ಕಲ್ಯಾಣ ಇಲಾಖೆ ಅಧಿಕಾರಿಗಳು, ವಿಶೇಷವಾಗಿ ಮಕ್ಕಳ ಸಹಾಯವಾಣಿ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭಾಗವಹಿಸಿದ್ದರು.