ಗ್ರಾಮ ವಾಸ್ತವ್ಯಕ್ಕೂ ಮುನ್ನ ನಡೆದ ಗ್ರಾಮ ಸಂಚಾರ
ಗ್ರಾಮ ವಾಸ್ತವ್ಯಕ್ಕೂ ಮುನ್ನ ನಡೆದ ಗ್ರಾಮ ಸಂಚಾರ
ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಗ್ರಾಮ ಸಂಚಾರದ ಕೊನೆಯ ದಿನವಾದ ಜ.30ರಂದು ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಸಂಚರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.
ಹಾಲಳ್ಳಿ, ಮಸ್ಕಲ್, ನಾಗೂರ(ಬಿ), ಸಂತಪೂರ, ಕಪ್ಪಿಕೇರಿ, ಜೊನ್ನೆಕೇರಿ ಹಾಗೂ ಜೋಜನಾ ಗ್ರಾಮಗಳಿಗೆ ತೆರಳಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಉನ್ನತೀಕರಣ, ದುರಸ್ತಿಣ ಸೋಲಾರ್ ಪೆನಲ್ ಅಳವಡಿಕೆ, ಶುದ್ಧ ಕುಡಿಯುವ ನೀರಿನ ಘಟಕ, ಶೌಚಾಲಯ, ಸಮುದಾಯ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಪ್ರತಿ ಗ್ರಾಮದಲ್ಲಿ ಸಾರ್ವಜನಿಕರ ಸಭೆ ನಡೆಸಿ ಗ್ರಾಮಸ್ಥರ ಸಮಸ್ಯೆಗಳ ಅಹವಾಲುಗಳನ್ನು ಆಲಿಸಿದರು. ಈ ವೇಳೆ ಗ್ರಾಮಸ್ಥರು ಸಿಸಿ ರಸ್ತೆ, ಚರಂಡಿ, ಸಮುದಾಯ ಭವನ, ಕೃಷಿ ಜಮೀನುಗಳ ರಸ್ತೆ, ಹೈ ಮಾಸ್ಟ್ ವಿದ್ಯುತ್ ದೀಪ, ವಿದ್ಯುತ್ ಸಮಸ್ಯೆಯಂತಹ ನಾನಾ ರೀತಿಯ ಸಮಸ್ಯೆಗಳನ್ನು ಹಂಚಿಕೊಂಡರು.
ಗ್ರಾಮಸ್ಥರ ಮನವಿಗಳನ್ನು ಶಾಂತತೆಯಿಂದ ಆಲಿಸಿದ ಶಾಸಕರು, ಜನರ ಸಮಸ್ಯೆಗಳನ್ನು ಅವರ ಬಳಿಗೆ ಹೋಗಿ ತಿಳಿದುಕೊಳ್ಳಬೇಕು. ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿ ಜನತೆಗೆ ಅನುಕೂಲ ಕಲ್ಪಿಸಬೇಕೆಂಬ ಸದಾಶಯದೊಂದಿಗೆ ಗ್ರಾಮ ಸಂಚಾರ ನಡೆಸುತ್ತಿದ್ದೇನೆ. ಅಧಿಕಾರಿಗಳ ತಂಡ ನನ್ನ ಜೊತೆಗೆ ಸಂಚರಿಸುತ್ತಿದೆ. ಸಾಧ್ಯವಾಗುವ ಕೆಲಸಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಕೆಲಸವಾಗುತ್ತಿದೆ. ಗ್ರಾಮ ಸಂಚಾರದ ಸಂದರ್ಭದಲ್ಲಿ ಬಂದಿರುವ ಬೇಡಿಕೆಗಳನ್ನು ಆದ್ಯತೆಯಾಗಿಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತೇನೆ. ಎಲ್ಲ ಬೇಡಿಕೆಗಳನ್ನು ಅನುದಾನದ ಲಭ್ಯತೆಗೆ ಅನುಗುಣ ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು
ಗ್ರಾಮ ಸಂಚಾರದಲ್ಲಿ ತಹಸೀಲ್ದಾರರಾದ ಮಲಶೆಟ್ಟಿ ಚಿದ್ರೆ, ಅಮಿತಕುಮಾರ ಕುಲಕರ್ಣಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಭಾಷ, ಜೆಸ್ಕಾಂ ಎಇಇ ರವಿ ಕಾರಬಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಕೃಷಿ ಇಲಾಖೆಯ ಧೂಳಪ್ಪ, ಪಂಚಾಯತ್ ರಾಜ್ ಇಂಜಿನೀಯರಿಂಗ್ ಇಲಾಖೆಯ ವೆಂಕಟರಾವ ಶಿಂಧೆ, ಮುಖಂಡರಾದ ವಸಂತ ಬಿರಾದಾರ, ಧೊಂಡಿಬಾ ನರೋಟೆ, ರಾಮಶೆಟ್ಟಿ ಪನ್ನಾಳೆ, ಅರಹಂತ ಸಾವಳೆ, ಶಿವರಾಜ ಅಲ್ಮಾಜೆ, ಸಾಗರ ಪಾಟೀಲ, ಖಂಡೋಬಾ ಕಂಗಟೆ, ಅಶೋಕ ಅಲ್ಮಾಜೆ, ಮಂಜು ಸ್ವಾಮಿ, ರಾವಸಾಬ್ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.