ಕೇಂದ್ರ ಸರ್ಕಾರದ ಬಜೆಟ್ ಅಭಿವೃದ್ಧಿ ಪೂರಕ: ಡಾ ಅಂಬಾರಾಯ ಅಷ್ಠಗಿ
ಕೇಂದ್ರ ಸರ್ಕಾರದ ಬಜೆಟ್ ಅಭಿವೃದ್ಧಿ ಪೂರಕ: ಡಾ ಅಂಬಾರಾಯ ಅಷ್ಠಗಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಮಂಡಿಸಿರುವ ಬಜೆಟ್ ವಿಕಸಿತ ಭಾರತದ ಕನಸು ನನಸು ಮಾಡುವ ಗುರಿ ಹೊಂದಿದ್ದು,, 12 ಲಕ್ಷದ ವರೆಗೆ ಆದಾಯ ತೆರಿಗೆಯ ವಿನಾಯಿತಿ ನೀಡಿರುವುದು, ಗದಗ ವಾಡಿ ರೈಲ್ವೆ ಯೋಜನೆಗೆ 500 ಕೋಟಿ ಹಣ ಕೊಟ್ಟಿರುವುದು ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದು ಸ್ವಾಗತಾರ್ಹವಾಗಿದ್ದು, ಒಟ್ಟಾರೆಯಾಗಿ ಈ ಬಾರಿಯ ಬಜೆಟ್ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ತಿಳಿಸಿದ್ದಾರೆ.