ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಅವರು ನರೇಗಾ ದಿನವನ್ನು ಗ್ರಾಮೀಣ ಕೂಲಿಕಾರೊಂದಿಗೆ ಕೇಕ್ ಕತ್ತರಿಸುವ ಮೂಲಕ ಆಚರಣೆ

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಅವರು ನರೇಗಾ ದಿನವನ್ನು ಗ್ರಾಮೀಣ ಕೂಲಿಕಾರೊಂದಿಗೆ ಕೇಕ್ ಕತ್ತರಿಸುವ ಮೂಲಕ ಆಚರಣೆ

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಅವರು ನರೇಗಾ ದಿನವನ್ನು ಗ್ರಾಮೀಣ ಕೂಲಿಕಾರೊಂದಿಗೆ ಕೇಕ್ ಕತ್ತರಿಸುವ ಮೂಲಕ ಆಚರಣೆ

ಕಲಬುರಗಿ: ತಾಲೂಕಿನ ಹಾಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಆಜಾದಪೂರ ಗ್ರಾಮದಲ್ಲಿ ನರೇಗಾ ದಿನ ಕಾರ್ಯಕ್ರಮ ಹಮ್ಮಿಕೋಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಅವರು ನರೇಗಾ ದಿನವನ್ನು ಗ್ರಾಮೀಣ ಕೂಲಿಕಾರೊಂದಿಗೆ ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಿ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಒಂದು ವರದಾನವಾಗಿದ್ದು, ಎಲ್ಲ ಅರ್ಹ ಕೂಲಿಕಾರ್ಮಿಕರಿಗೆ ಒಂದು ಜಾಬ್ ಕಾರ್ಡ್ಗೆ ವಾರ್ಷಿಕ ಅವಧಿಯಲ್ಲಿ 100 ಮಾನವ ದಿನಗಳ ಕೂಲಿ ಕೆಲಸವನ್ನು ಈ ಯೋಜನೆಯಡಿ ನೀಡಲಾಗುತ್ತದೆ. 

ಹೀಗಾಗಿ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು, ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಎರೆ ಹುಳು ಘಟಕ, ದನದ ಕೊಟ್ಟಿಗೆ ಮುಂತಾದ ಕಾಮಗಾರಿಗಳನ್ನು ಗ್ರಾಮ ಪಂಚಾಯತಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆಯ ಸಹಯೋಗದಲ್ಲಿ ಇರುವ ಯೋಜನೆಗಳನ್ನು ಬಳಸಿಕೊಳ್ಳಬೇಕು ಎಂದು ವಿವರವಾಗಿ ಹೇಳಿದರು. 

ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ ರವರು ಮಾತನಾಡುತ್ತಾ ನರೇಗಾ ದಿವಸ ಆಚರಣೆ ಅಂಗವಾಗಿ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಕೂಲಿಕಾರರು ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ ಸೈಯದ ಪಟೇಲ, (ಗ್ರಾಉ) ಸಹಾಯಕ ನಿರ್ದೇಶಕ ರೇವಣಸಿದ್ದಪ್ಪ ಗೌಡರ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸುನಿತಾ ಆನಂದ ರಾಠೋಡ, ಉಪಾಧ್ಯಕ್ಷರಾದ ಮೀನಾಕ್ಷಿ ಸೂರ್ಯಕಾಂತ, ಪಿ.ಡಿ.ಓ ರಾಜೇಶ್ವರಿ, ಜಿ.ಕೆ.ಎಮ್ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ಶ್ರೀನಿವಾಸ ಸರಡಗಿ ಪ್ರಾ.ಆ.ಕೇಂದ್ರದ ವೈಧ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು, ಜಿಲ್ಲಾ ಮತ್ತು ತಾಲೂಕು ಐ.ಇ.ಸಿ ಸಂಯೋಜಕರು,ಆಶಾ ಕಾರ್ಯಕರ್ತೆಯರು, ಆಜಾದಪೂರ ಗ್ರಾಮದ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಒಟ್ಟು 145 ಮಹಿಳೆ ಮತ್ತು 13 ಪುರುಷ ಹೀಗೆ ಒಟ್ಟು158 ಜನ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಹಾಜರಿದ್ದು, ಆರೋಗ್ಯ ಅಮೃತ ಅಭಿಯಾನದಡಿ ಬಿ.ಪಿ, ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆ ಇನ್ನು ಮುಂತಾದ ತಪಾಸಣೆಗಳನ್ನು ಏಕ ಕಾಲಕ್ಕೆ ಮಾಡಲಾಯಿತು.