ದೆಹಲಿಯ ಬಿಜೆಪಿ ದಿಗ್ವಿಜಯ ಪ್ರಧಾನಿ ಮೋದಿ ನಾಯಕತ್ವದ ಗೆಲುವು ಡಾ ಅಂಬಾರಾಯ ಅಷ್ಠಗಿ

ದೆಹಲಿಯ ಬಿಜೆಪಿ ದಿಗ್ವಿಜಯ ಪ್ರಧಾನಿ ಮೋದಿ ನಾಯಕತ್ವದ ಗೆಲುವು ಡಾ ಅಂಬಾರಾಯ ಅಷ್ಠಗಿ

ದೆಹಲಿಯ ಬಿಜೆಪಿ ದಿಗ್ವಿಜಯ ಪ್ರಧಾನಿ ಮೋದಿ ನಾಯಕತ್ವದ ಗೆಲುವು ಡಾ ಅಂಬಾರಾಯ ಅಷ್ಠಗಿ

ಕಲಬುರಗಿ : ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ಮಾನ್ಯ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಶಕ್ತಿ ತುಂಬುವ ಕೆಲಸವನ್ನು ದೆಹಲಿಯ ಮಹಾಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಸಧೃಡ ಭಾರತ ಕಟ್ಟಲು ಒಳ್ಳೆಯ ಸಂದೇಶ ನೀಡಿದ್ದಾರೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಅಭಿಪ್ರಾಯ ಪಟ್ಟಿದ್ದಾರೆ 

ಬಿಜೆಪಿಗೆ ದಾಖಲೆಯ ದಿಗ್ವಿಜಯ ದೊರಕಿಸಿಕೊಟ್ಟ ದೆಹಲಿಯ ಮತದಾರರಿಗೆ ಕೃತಜ್ಞತೆ ಸಲ್ಲಿಸಿ, ಮಾನ್ಯ ಮೋದಿ ಅವರನ್ನು ಕರ್ನಾಟಕದ ಜನತೆಯ ಪರವಾಗಿ ಡಾ ಅಂಬಾರಾಯ ಅಷ್ಠಗಿ ಅಭಿನಂದಿಸಿದ್ದಾರೆ 

ವಿಕಸಿತ ಭಾರತದ ಸಂಕಲ್ಪ ತೊಟ್ಟು ದೇಶವನ್ನು ಜಾಗತಿಕ ಮಟ್ಟದಲ್ಲಿ ಬಲಿಷ್ಟಗೊಳಿಸಲು ಯೋಜನೆ ರೂಪಿಸುತ್ತಿರುವ ಪ್ರಧಾನಿಯವರಿಗೆ ದೇಶದ ರಾಜಧಾನಿಯ ಗೆಲುವು ಭೀಮ ಬಲವನ್ನು ತಂದು ಕೊಟ್ಟಿದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಹಾಗೂ ಗೃಹ ಸಚಿವರಾದ ಅಮಿತ್ ಷಾ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಹೆಗ್ಗಳಿಕೆಯ ವಿಜಯ ಸಾಧಿಸಿದೆ.

 ಬಿಜೆಪಿಯ ವಿರುದ್ಧ ಸುಳ್ಳು ಅಪಪ್ರಚಾರಗಳನ್ನು ನಡೆಸಿ ತಾತ್ಕಾಲಿಕ ಗೆಲುವು ಸಾಧಿಸಬಹುದೇ ಹೊರತು ಪಕ್ಷ ಸಿದ್ಧಾಂತದೊಂದಿಗೆ ಸೆಣಸಿ ಬಿಜೆಪಿ ಮಣಿಸಲು ಸಾಧ್ಯವಿಲ್ಲ ಎನ್ನುವುದನ್ನು ದೆಹಲಿಯ ಫಲಿತಾಂಶ ತೋರಿಸಿಕೊಟ್ಟಿದೆ. ಭವಿಷ್ಯತ್ತಿನಲ್ಲಿ ಈ ಫಲಿತಾಂಶ ಕರ್ನಾಟಕದಲ್ಲೂ ಪ್ರತಿಫಲಿಸಲಿದೆ ಎಂದು ಡಾ ಅಂಬಾರಾಯ ಅಷ್ಠಗಿ ನುಡಿದಿದ್ದಾರೆ.