ವಿವೇಕಾನಂದ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

ವಿವೇಕಾನಂದ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ಕಲಬುರಗಿ: ಗಂಗಾನಗರದಲ್ಲಿರುವ ಶ್ರೀ ವಿವೇಕಾನಂದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ 16ನೇ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆರಾದ ರೇಣುಕಾ ಹೋಳಕರ್, ಅನುಪಮಾ ಕಮಕನೂರ, ಪಿಐ ಕುಬೇರ ಎಸ್. ರಾಯಮಾನೆ, ಶಿಕ್ಷಣಾಧಿಕಾರಿ ಬಸವಂತರಾಯ ಜಿಡ್ಡೆ, ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭೀವೃದ್ಧಿ ಸಂಘದ ನಿಕಟಪೂರ್ವ ಅಧ್ಯಕ್ಷ ಬಾಬುರಾವ ಜಮಾದಾರ, ಶ್ರೀ ವಿವೇಕಾನಂದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಅಧ್ಯಕ್ಷ ಬಸವರಾಜ ಎನ್. ಮಳ್ಳಿ, ವಿಜಯಕುಮಾರ ಹದಗಲ್, ಶಾಂತಪ್ಪ ಕೂಡಿ, ಈರಣ್ಣ ಡಾಂಗೆ, ದಾದಾಸಾಹೇಬ ಹೋಸೂರ, ಕುಮಾರ ದತ್ತ ಸೋಲಾಪೂರ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಮುಖ್ಯೋಪಾಧ್ಯಾಯರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.