ಕಾರ್ಮಿಕನ ಶವ ಎಳೆದೊಯ್ದ ಪ್ರಕರಣ: ಕಾರ್ಖಾನೆ ಮಾಲೀಕರ ವಿರುದ್ಧ ಕ್ರಮಕ್ಕೆ ಆಗ್ರಹ

ಕಾರ್ಮಿಕನ ಶವ ಎಳೆದೊಯ್ದ ಪ್ರಕರಣ: ಕಾರ್ಖಾನೆ ಮಾಲೀಕರ ವಿರುದ್ಧ ಕ್ರಮಕ್ಕೆ ಆಗ್ರಹ
ಕಲಬುರಗಿ: ಕಳೆದ ವಾರ ಜಿಲ್ಲೆಯ ಸಿಮೆಂಟ್ ಕಾರ್ಖಾನೆಯೊಂದರಲ್ಲಿ ಹೃದಯಾಘಾತದಿಂದ ಮೃತಪಟ್ಟ ಚಂದನಸಿAಗ್ ಎಂಬ ಕಾರ್ಮಿಕನ ಶವವನ್ನು ಅಗೌರವದಿಂದ ಎಳೆದೊಯ್ದ ಪ್ರಕರಣವನ್ನು ಖಂಡಿಸಿ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನಂತರಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.
ಮೃತ ಕಾರ್ಮಿಕನ ಶವವನ್ನು ಅಗೌರವದಿಂದ ಎಳೆದೊಯ್ದ ಪ್ರಕರಣ ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ. ಕಾರ್ಖಾನೆಯ ಮಾಲೀಕರ ವಿರುದ್ಧ ಕ್ರಮಜರುಗಿಸುವ ಬದಲು ಈ ಅಮಾನವೀಯ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾರ್ಮಿಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲಿಗೆ ಹಾಕಲಾಗಿದೆ. ಘಟನೆ ನಡೆದು ಒಂದು ವಾರವಾದರೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಈ ಬಗ್ಗೆ ಚಕಾರವೆತ್ತದೆ ದಿವ್ಯ ಮೌನವಹಿಸಿದ್ದಾರೆ. ಕಾರ್ಮಿಕನ ಶವವನ್ನು ಅಗೌರವದಿಂದ ಎಳೆದೊಯ್ದ ಪ್ರಕರಣಕ್ಕೆ ಸಂಬAಧಿಸಿದAತೆ ಕಾರ್ಖಾನೆ ಮಾಲೀಕರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ಸಂಬAಧಪಟ್ಟ ಇತರ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಮನವಿಪತ್ರದಲ್ಲಿ ಒತ್ತಾಯಿಸಲಾಗಿದೆ.
ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ.ಸಜ್ಜನ್, ನಾಗಯ್ಯ ಸ್ವಾಮಿ, ಶೇಖಮ್ಮಕುರಿ, ಯಶ್ವಂತ ಪಾಟೀಲ, ಬಾಬು ಹೂವಿನಹಳ್ಳಿ, ನಾಗಪ್ಪ ರಾಯಚೂರಕರ್, ವಿಶ್ವನಾಥ ರಾಠೋಡ್, ಸುರೇಶ ರಾಠೋಡ್, ರಾಮಶೆಟ್ಟಿ ಜಾಧವ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ
ರು.