ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹೋರಾಟಗಾರರನ್ನು ಸ್ಮರಿಸೋಣ : ಡಾ ಅಂಬಾರಾಯ ಅಷ್ಠಗಿ

ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹೋರಾಟಗಾರರನ್ನು ಸ್ಮರಿಸೋಣ : ಡಾ ಅಂಬಾರಾಯ ಅಷ್ಠಗಿ

ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹೋರಾಟಗಾರರನ್ನು ಸ್ಮರಿಸೋಣ : ಡಾ ಅಂಬಾರಾಯ ಅಷ್ಠಗಿ 

ಎರಡು ನೂರಕ್ಕೂ ಹೆಚ್ಚು ವರ್ಷಗಳ ಬ್ರಿಟಿಷರ ಕ್ರೂರ ಆಡಳಿತದಿಂದ ಬಿಡುಗಡೆ ಹೊಂದಿ, ನಮ್ಮ ದೇಶ ಸ್ವಾತಂತ್ರ್ಯದ ಬೆಳಕನ್ನು ಕಂಡ ಸುದಿನವಿದು.ಇಂತಹ ಅಭೂತಪೂರ್ವ ಸ್ವಾತಂತ್ರ್ಯ ಹೋರಾಟಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ಎಲ್ಲ ಮಹಾನ ಚೇತನಗಳಿಗೆ ಈ ಸಂದರ್ಭದಲ್ಲಿ ಸ್ಮರಿಸೋಣ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.

ಅವರು ನಾಗನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ೭೭ ನೇ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಡಬೇಂಬ ಉದ್ದೇಶದಿಂದ ಶಾಲೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ೨ ಲಕ್ಷ ೨೫ ಸಾವಿರ ರೂಪಾಯಿಗಳನ್ನು ದೇಣಿಗೆ ನೀಡಿದ ಇಂದುಬಾಯಿ ರವೀಂದ್ರ ಗುಗ್ಗವಾಡ ದಂಪತಿಗಳಿಗೆ ಶಾಲೆಯ ಹಾಗೂ ಗ್ರಾಮಸ್ಥರ ಅವರನ್ನು ಅಭಿನಂದನಾ ಪತ್ರ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ದಾನಿಗಳಾದ ರವೀಂದ್ರ ಗುಗ್ಗವಾಡ ಮಾತನಾಡಿ, ಮನುಷ್ಯ ಎಷ್ಟೇ ದೊಡ್ಡ ಪ್ರಮಾಣದಲ್ಲಿ ಹಣ ಗಳಿಸಿದ್ದರೂ ಸಹ ಅದರಲ್ಲಿ ಬಡ ಮಕ್ಕಳ ಶೈಕ್ಷಣಿಕ ಏಳ್ಗೆಗಾಗಿ ಶ್ರಮಿಸಬೇಕಾದದ್ದೂ, ಪ್ರತಿಯೋಬ್ಬರ ಕರ್ತವ್ಯ ಎಂದು ನುಡಿದರು.

 ನಂದಿಕೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪವನ್ ಕುಮಾರ್ ವಳಕೇರಿ ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಕಾರ್ಯಕ್ಕೆ ಒಂದು ವರ್ಷದ ವೈ - ಫೈ ಶುಲ್ಕವನ್ನು ದೇಣಿಗೆ ನೀಡುವುದಾಗಿ ವೀರಶೈವ ಲಿಂಗಾಯತ ಸಮಾಜದ ಮುಖಂಡ ಮಂಜು ರೆಡ್ಡಿ ತಿಳಿಸಿದರು.

  ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾಜೇಂದ್ರ ಕರೆಕಲ್, ಪತ್ರಕರ್ತ ಶರಣಗೌಡ ಪಾಟೀಲ್ ಪಾಳಾ, ಪ್ರಮುಖರಾದ ಮಲ್ಲಿಕಾರ್ಜುನ ಇಟಗಿ, ವಿನೋದ ಪಾಟೀಲ್ ಸರಡಗಿ,ಅಶೋಕ್ ನಾಗನಹಳ್ಳಿ, ಮಹಾದೇವ ನಾಗನಹಳ್ಳಿ, ಹುಸೇನಯ್ಯ ಗುತ್ತೇದಾರ್, ಈ ಸಮಯದಲ್ಲಿ ಶಾಲೆಯ ಎಸ್ ಡಿ ಎಂ ಸಿ ಪದಾಧಿಕಾರಿಗಳಿಗೆ ಸತ್ಕರಿಸಲಾಯಿತು. 

ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

   (ಸಂಗಮೇಶ ನಾಗನಹಳ್ಳಿ ಯವರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಶಾಲಾ ಕೋಣೆಗಳ ನಿರ್ಮಾಣಕ್ಕೆ ಅನುದಾನವನ್ನು ಒದಗಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದರು).

                      ಡಾ ಅಂಬಾರಾಯ ಅಷ್ಠಗಿ

                 ಮಾಜಿ ಜಿ ಪಂ ಅಧ್ಯಕ್ಷ, ಕಲಬುರಗಿ