ಶಂಭುಲಿಂಗ ಖಂಡಾಲ್ಕರ್ ಕೊಲೆ ಆರೋಪಿಗಳನ್ನು ಬಂಧಿಸಬೇಕೆಂದು ಧರಣಿ

ಶಂಭುಲಿಂಗ ಖಂಡಾಲ್ಕರ್ ಕೊಲೆ ಆರೋಪಿಗಳನ್ನು ಬಂಧಿಸಬೇಕೆಂದು ಧರಣಿ
ಕಲಬುರಗಿ:ಲಾಡಮುಗಳಿ ಗ್ರಾ.ಪಂ.ಮಾಜಿ ಅಧ್ಯಕ್ಷ ಶಂಭುಲಿಂಗ ಖಂಡಾಲ್ಕರ್ ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ಸರ್ಕಾರಿ ಉದ್ಯೋಗ, ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಲೆ) ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಾಯಿತು. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಎ.ಬಿ.ಹೊಸಮನಿ, ರಾಜ್ಯ ಸಮಿತಿ ಸದಸ್ಯ ಪಾಂಡುರAಗ ಎಂ.ಕೊಟ್ರೆ, ಜಿಲ್ಲಾಧ್ಯಕ್ಷ ರಾಜಕುಮಾರ ನಡಗೇರಿ, ಕಾರ್ಮಿಕ ಘಟಕದ ಅಧ್ಯಕ್ಷ ಶಿವಕುಮಾರ ಮುಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿಲಿಂದ ಕಣಮಸ್, ಜಿಲ್ಲಾ ಉಪಾಧ್ಯಕ್ಷ ಮಹಾದೇವ ಅಣವರಕರ, ಭೀಮಾಶಂಕರ ಕಟ್ಟಿಸಂಗಾವಿ ಸೇರಿದಂತೆ ಮತ್ತಿತರರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.