ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ಖಂಡನೀಯ :.. ಶೇಖರ ಪಾಟೀಲ.

ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ಖಂಡನೀಯ :.. ಶೇಖರ ಪಾಟೀಲ.

ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ಖಂಡನೀಯ :..

 ಶೇಖರ ಪಾಟೀಲ. ಶಹಾಬಾದ :..ಮಹಾರಾಷ್ಟ್ರದ ಶಿವಸೇನೆ ಹಾಗೂ ಎಂಇಎಸ ಪುಂಡರು ಕೆಎಸಆರಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ರಾಜ್ಯದ ಬಸ್ ಗಳಿಗೆ ಕಪ್ಪು ಮಸಿ ಬಳಸದಿರುವುದು ಖಂಡನೀಯ ಎಂದು ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಶೇಖರ ಪಾಟೀಲ ಹೇಳಿದರು. ಅವರು ತಾಲ್ಲೂಕ ತಹಶೀಲ್ದಾರ್ ಜಗದೀಶ ಚೌರ ರವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ಮಹಾರಾಷ್ಟ್ರ ಸರಕಾರ ಹಾಗೂ ಪೊಲಿಸರು ಶಾಂತಿ ಕದಡುವ ನಿಟ್ಟಿನಲ್ಲಿ ಇಂತಹ ಕೃತ್ಯ ಎಸಗಿದ್ದಾರೆ, ಈ ಎಂಇಎಸ ಪುಂಡರ ಮೇಲೆ ದೇಶದ್ರೋಹ ಪ್ರಕರಣ ದಾಲಿಸುವಂತೆ ನಮ್ಮ ಕರ್ನಾಟಕ ಸರಕಾರ, ಮಹಾರಾಷ್ಟ್ರ ಸರಕಾರದ ಮೇಲೆ ತೀವ್ರ ಒತ್ತಡ ಹೇರ ಬೇಕು ಎಂದರು. ಭಾರತ ದೇಶದ ಒಕ್ಕೂಟ ವ್ಯವಸ್ಥೆಯ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ, ಅಲ್ಲದೇ ಬಸ್ ನಿರ್ವಾಹಕನ ಮೇಲೆ ಸುಳ್ಳು ಸುಳ್ಳು ಪೋಕ್ಸೋ ಪ್ರಕರಣವನ್ನು ದಾಖಲಿಸಿ, ವಾಪಸ ಪಡೆಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ತಹಶೀಲ್ದಾರ್ ರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ವಿಕಾಸ ಕರಣಿಕ, ಸಂಜಯ ರಾಠೋಡ ಸೇರಿದಂತೆ ಅನೇಕರು ಇದ್ದರು.