ಶಿವಮೊಗ್ಗ ನಗರದಲ್ಲಿ ಮಾರ್ಚ್ 16ರಂದು ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಶಿವಮೊಗ್ಗ ನಗರದಲ್ಲಿ ಮಾರ್ಚ್ 16ರಂದು ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ
ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಈ ಸಂಘದ ವತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿ ಜಿಲ್ಲಾ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ ಪ್ರತಿ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮದ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿಯ ಸೇವೆ ಮಾಡುತ್ತಾ ಬಂದಿದೆ ಅದೇ ರೀತಿಯಾಗಿ ಮಾರ್ಚ್ 16ರಂದು ಭಾನುವಾರ ಬೆಳಿಗ್ಗೆ 10:00ಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಗಾಯನ ಕ್ಷೇತ್ರದಲ್ಲಿ ಮತ್ತು ಸೇವಾ ಕ್ಷೇತ್ರದಲ್ಲಿ ಮತ್ತು ಕಾವ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಷ್ಟ್ರಮಟ್ಟದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಅದೇ ರೀತಿಯಾಗಿ ಕಲ್ಬುರ್ಗಿ ಜಿಲ್ಲೆಯ ಸಾಹಿತ್ಯ ಆಸಕ್ತರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಲ್ಬುರ್ಗಿ ಜಿಲ್ಲಾ ಬರಹಗಾರ ಸಂಘದ ಜಿಲ್ಲಾಧ್ಯಕ್ಷರಾದ ಮಹಾಂತೇಶ್ ಎನ್ ಪಾಟೀಲ್ ಯಾತನೂರು ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ
ವರದಿ ಜೆಟ್ಟಪ್ಪ ಎಸ್ ಪೂಜಾರಿ