ಬಸವೇಶ್ವರ ಆಸ್ಪತ್ರೆಯಲ್ಲಿ ಶಾಲಾ ಸಂಜೀವಿನಿ ಯೋಜನೆಯಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಸವೇಶ್ವರ ಆಸ್ಪತ್ರೆಯಲ್ಲಿ ಶಾಲಾ ಸಂಜೀವಿನಿ ಯೋಜನೆಯಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಸವೇಶ್ವರ ಆಸ್ಪತ್ರೆಯಲ್ಲಿ ಶಾಲಾ ಸಂಜೀವಿನಿ ಯೋಜನೆಯಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ವಿಭಾಗದಿಂದ ಸಂಸ್ಥೆಯ ಪ್ರೌಢಶಾಲೆ ಮಕ್ಕಳಿಗಾಗಿ *ಶಾಲಾ ಸಂಜೀವಿನಿ* ಯೋಜನೆ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ಮಕ್ಕಳಿಗೆ ಅವಶ್ಯಕ ಇರುವ ರಕ್ತ ಪರೀಕ್ಷೆ, ಆರೋಗ್ಯ ದ ಕುರಿತು ಆಪ್ತ ಸಮಾಲೋಚನೆ ಹಾಗೂ ಸಲಹೆ ನೀಡಿ ಉಚಿತವಾಗಿ ಔಷಧಿಗಳನ್ನು ವಿತರಣೆ ಮಾಡಲಾಯಿತು 

ಈ ಶಿಬಿರದಲ್ಲಿ ಒಟ್ಟು 77 ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು. ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಹಾಗೂ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಬಸವೇಶ್ವರ ಆಸ್ಪತ್ರೆಯ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಡಾ ಕಿರಣ್ ದೇಶಮುಖ್ ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರ ಪ್ರೇರಣೆಯಿಂದ ಪ್ರಾರಂಭವಾದ ಈ ಯೋಜನೆ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ವರದಾನವಾಗಿದೆ

ಮಹಾದೇವ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ರಾದ ಡಾ ಶರಣಗೌಡ ಪಾಟೀಲ್ ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕರಾದ ಡಾ ಆನಂದ ಗಾರಂಪಳ್ಳಿಯವರು ಈ ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸುಕೊಂಡು ಬರುತ್ತಿದ್ದಾರೆ ಎಂದು ಬಸವೇಶ್ವರ ಆಸ್ಪತ್ರೆಯ ಸಂಚಾಲಕರಾದ ಡಾ ಕಿರಣ್ ದೇಶಮುಖ್ ಹರ್ಷ ವ್ಯಕ್ತಪಡಿಸಿದರು 

ಈ ಶಿಬಿರದ ನೇತ್ರತ್ವವನ್ನು ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ ರೂಪಾ ಮಂಗಶೆಟ್ಟಿ ವಹಿಸಿದ್ದರು ಮಕ್ಕಳ ತಜ್ಞ ವೈದ್ಯರಾದ ಡಾ ಬಸವರಾಜ ಪಾಟೀಲ,ಡಾ ಕಿರಣ್ ಹೊಸಗೌಡ, ಡಾ ಅಪೂರ್ವ ಎ ಬಿ, ಡಾ ಐಶ್ವರ್ಯ ಬಿಜಾಪುರೆ, ಡಾ ಮೀನಾಕ್ಷಿ ಎಸ್ ಡಬ್ಲ್ಯೂ, ಡಾ ರೋಹಿಣಿ ದೇಸಾಯಿ, ಡಾ ಶಿವಕುಮಾರ್ ಸಂಗೋಳಗಿ,ಡಾ ಶರಣಕುಮಾರ ಕೆ ಶಿಬಿರದಲ್ಲಿ ಭಾಗವಹಿಸಿದ್ದರು.