ಕಲಬುರಗಿ ಜಿಲ್ಲೆಯ ತಳವಾರ ಮಹಾಸಭಾ ಪದಾಧಿಕಾರಿಗಳ ನೇಮಕ

ಕಲಬುರಗಿ ಜಿಲ್ಲೆಯ ತಳವಾರ ಮಹಾಸಭಾ ಪದಾಧಿಕಾರಿಗಳ ನೇಮಕ
ಕಲಬುರಗಿ: ಧಾರವಾಡ ನಗರದಲ್ಲಿ ಜರುಗಿದ ಕರ್ನಾಟಕ ರಾಜ್ಯ ತಳವಾರ ಮಹಾಸಭಾದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಾಸಭೆಯ ಪ್ರಭಾವಿ ರಾಜ್ಯ ಅಧ್ಯಕ್ಷ ಮತ್ತು ರಾಜ್ಯ ಕಾರ್ಯದರ್ಶಿಯ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕಲಬುರಗಿ ಜಿಲ್ಲೆಯ ನೂತನ ತಾಲೂಕು ಅಧ್ಯಕ್ಷರು ಹಾಗೂ ಜಿಲ್ಲಾ ಉಪಾಧ್ಯಕ್ಷರನ್ನು ಏಕಮತದಿಂದ ಆಯ್ಕೆ ಮಾಡಲಾಯಿತು.
ಈ ಸಭೆಯಲ್ಲಿ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಭೀಮಶಂಕರ್ ಎನ್. ಅಂಕಲಗಿಯನ್ನು ಕಲಬುರಗಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಯಿತು. ಅಫಜಲಪುರ ತಾಲೂಕು ಅಧ್ಯಕ್ಷರಾಗಿ ಗುರು ಹಾವನೂರ, ಕಾಳಗಿ ತಾಲೂಕಿನ ಅಧ್ಯಕ್ಷರಾಗಿ ಈರಣ್ಣ ದಂಡೋತ್ತಿ, ಹಾಗೂ ಚಿಂಚೋಳಿ ತಾಲೂಕು ಘಟಕದ ಅಧ್ಯಕ್ಷರಾಗಿ ಸುದರ್ಶನ ಸಂತಾಳ ಆಯ್ಕೆಯಾಗಿದ್ದಾರೆ.
ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳು ಸಂಘಟನೆಯ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು. ಸಭೆಯಲ್ಲಿ ಮಹಾಸಭೆಯ ಹಿರಿಯರು ಹಾಗೂ ಪ್ರಭಾವಿ ಸದಸ್ಯರು ಶುಭಹಾರೈಸಿದರು.
ಈ ಸಮಾರಂಭದಲ್ಲಿ ನೂರಾರು ಸದಸ್ಯರು ಪಾಲ್ಗೊಂಡಿದ್ದು, ಸಂಸ್ಥೆಯ ಭವಿಷ್ಯದ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮುಂದಿನ ತಿಂಗಳಲ್ಲಿ ಮಹಾಸಭೆಯ ಕಾರ್ಯತಂತ್ರಗಳನ್ನು ಗಟ್ಟಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ತಳವಾರ ಮಹಾಸಭಾ ಅಧ್ಯಕ್ಷರಾದ ಚಂದ್ರಕಾAತ ತಳವಾರ, ಜೇವರ್ಗಿ ತಾಲೂಕು ಅಧ್ಯಕ್ಷ ಗಿರೀಶ್ ತುಂಬಗಿ, ಗುರು ಜೈನಾಪುರ, ರಾಜೇಂದ್ರ ಸಿರಸಿಗಿ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.