ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ: ಸವಿತಾ ನಾಸಿ

ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ: ಸವಿತಾ ನಾಸಿ
ಕಲಬುರಗಿ: ಇದೇ ಮೊಟ್ಟ ಮೊದಲನೇ ಬಾರಿಗೆ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ರಾಜ್ಯಮಟ್ಟದ "ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ" ಯನ್ನು ಹಾಗೂ ಕಲ್ಬುರ್ಗಿ ಜಿಲ್ಲೆಯ ಪದಾಧಿಕಾರಿಗಳ ಪದಗ್ರಹಣ ಹಾಗೂ ಸುಭದ್ರ ರೇಖೆಗಳು ಕವನ ಸಂಕಲನ ಪುಸ್ತಕ ಬಿಡುಗಡೆ ಹಾಗೂ ಬೈಕ್ ರ್ಯಾಲಿ ಮಾರ್ಚ್ 9 ರಂದು ನಗರದ ಅಪ್ಪ ಸೆಂಚುರಿಯನ್ ಹಾಲಿನಲ್ಲಿ ಬೆಳಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಸಂಘದ ಕಲ್ಬುರ್ಗಿ ತಾಲೂಕ ಅಧ್ಯಕ್ಷೇ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಜೇವರ್ಗಿ ಕಾಲನೆಯ ಉಪನ್ಯಾಸಕಿ ಸವಿತಾ ಬಿ ನಾಸಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ವೀರ ಸಾಧಕಿ "ರಾಣಿ ಅಬ್ಬಕ್ಕದೇವಿ ಪ್ರಶಸ್ತಿ"ಯನ್ನು ಪ್ರಧಾನ ಮಾಡಲಾಗಿದ್ದು, ಹಿರಿಯ ವಿದ್ವಾಂಸರಿAದ ಮಹಿಳಾ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಎಂದು ಅವರು ತಿಳಿಸಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಸರಕಾರಿ ಮಹಿಳಾ ನೌಕರರ ಕುರಿತು ಚಿಂತನ ಮಂಥನ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ನಗರದ ಸಾಹಿತಿಗಳು ಶಿಕ್ಷಕರು ಸರಕಾರಿ ನೌಕರರು ಹಾಗೂ ಮಹಿಳಾಪರ ಚಿಂತಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.