ಜನರಿಗೆ ಆರ್ಥಿಕ ಹೊರೆ ಹೇರುವ ನಿರಾಶಾದಾಯಕ ಬಜೆಟ್ : ಡಾ ಅಂಬಾರಾಯ ಅಷ್ಠಗಿ

ಜನರಿಗೆ ಆರ್ಥಿಕ ಹೊರೆ ಹೇರುವ ನಿರಾಶಾದಾಯಕ ಬಜೆಟ್ : ಡಾ ಅಂಬಾರಾಯ ಅಷ್ಠಗಿ
ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2025-26ರ ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ, ಸಬಲೀಕರದತ್ತ ರಾಜ್ಯವನ್ನು ತೆಗೆದುಕೊಂಡು ಹೋಗುವ ಯಾವುದೇ ಕ್ರಮ ಈ ಬಜೆಟ್ ಒಳಗೊಂಡಿಲ್ಲ. ಕಲ್ಯಾಣ ಕರ್ನಾಟಕಕ್ಕೆ ಯಾವುದೇ ವಿಶೇಷ ಕೊಡುಗೆ ನೀಡಿಲ್ಲ. ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ. ಹೀಗಾಗಿ ಇದು ಜನರ ಮೇಲೆ ಆರ್ಥಿಕ ಹೊರೆ ಹೇರುವ ಮತ್ತೊಂದು ನಿರಾಶಾದಾಯಕ ಬಜೆಟ್ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಆರೋಪಿಸಿದ್ದಾರೆ.