ಡಾ. ವಿಶಾಲಾಕ್ಷಿ ಕರಡ್ಡಿ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ' ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ

ಡಾ. ವಿಶಾಲಾಕ್ಷಿ ಕರಡ್ಡಿ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ' ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ

ಡಾ. ವಿಶಾಲಾಕ್ಷಿ ಕರಡ್ಡಿ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ' ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ 

ಬೆಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ' ರಾಜ್ಯ ಪ್ರಶಸ್ತಿ ಕರ್ನಾಟಕ ಸರ್ಕಾರವು ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಅಸಾಧಾರಣ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ನೀಡುವ ಗೌರವಾನ್ವಿತ ಪ್ರಶಸ್ತಿ ಇದಾಗಿದೆ. ಈ ಪ್ರಶಸ್ತಿಯು ಮಹಿಳಾ ಅಭಿವೃದ್ಧಿ, ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿದವರಿಗೆ ಪ್ರತಿವರ್ಷ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರದಾನ ಮಾಡಲಾಗುತ್ತದೆ. 

ಡಾ. ವಿಶಾಲಾಕ್ಷಿ ಕರಡ್ಡಿ ಅವರು ಕನ್ನಡದ ಪ್ರಸಿದ್ಧ ಸಾಹಿತಿಯಾಗಿದ್ದು, ಅವರ ಸಾಹಿತ್ಯ ಕೃತಿಗಳು ಹಾಗೂ ಚಿಂತನಗಳಲ್ಲಿ ವಿಶಿಷ್ಟ ಸ್ಥಾನ ಹೊಂದಿದ್ದಾರೆ. ಅವರು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಅವರು ಹಲವಾರು ಸಾಹಿತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಜನವರಿ 19, 2025 ರಂದು ನಡೆದ ಕಲಬುರಗಿ ಜಿಲ್ಲಾ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಕರಡ್ಡಿ ಅವರನ್ನು ಸತ್ಕರಿಸಿದರು.ಅವರು 'ಚಿಂತನ' ಎಂಬ ಶೀರ್ಷಿಕೆಯಡಿ ನಗುವಿನ ಮಹತ್ವದ ಕುರಿತು ಚರ್ಚಿಸಿದರು.

ಅವರ ಸಾಹಿತ್ಯ ಕೃತಿಗಳು ಮತ್ತು ಚಿಂತನಗಳು ಕನ್ನಡ ಸಾಹಿತ್ಯ ಪ್ರಪಂಚದಲ್ಲಿ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ಇವರಿಗೆ  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿ ಗೌರವಿಸಿದರು 

ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಮಾಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕ ರಾಘವೇಂದ್ರ ಟಿ, ಸಾಹಿತಿಗಳು ಮತ್ತು ಗಣ್ಯಮಾನ್ಯರು ಹಾಗೂ ಸಾಹಿತಿ ಡಾ ಎಸ್.ಎಲ್.ಪಾಟೀಲ ಉಸ್ಥಿತರಿದ್ದರು