ಕಮಲಾಪುರ ತಾಲೂಕಿನ ಅಲ್ಪಸಂಖ್ಯಾತರ ಘಟಕದ ಸಮಿತಿಯ ನೂತನ ತಾಲೂಕಾಧ್ಯಕ್ಷರನ್ನಾಗಿ ತಾಜುದ್ದೀನ್ ಪಟೇಲ್ ಆಯ್ಕೆ.

ಕಮಲಾಪುರ ತಾಲೂಕಿನ ಅಲ್ಪಸಂಖ್ಯಾತರ ಘಟಕದ ಸಮಿತಿಯ ನೂತನ ತಾಲೂಕಾಧ್ಯಕ್ಷರನ್ನಾಗಿ ತಾಜುದ್ದೀನ್ ಪಟೇಲ್ ಆಯ್ಕೆ.
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ತಾಲೂಕು ಅಧ್ಯಕ್ಷರನ್ನಾಗಿ ಅಂಬಲಗಾ ಗ್ರಾಮ ಪಂಚಾಯತಿ ಅಧ್ಯಕ್ಷರಾದ ತಾಜ್ಜುದೀನ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಕಲಬುರಗಿ ಜಿಲ್ಲಾ ಕಮಲಾಪುರ ತಾಲೂಕಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರು ಕಮಲಾಪುರ ತಾಲೂಕಿನ ಅಲ್ಪಸಂಖ್ಯಾತರ ಘಟಕದ ತಾಲೂಕಾ ಅಧ್ಯಕ್ಷರನ್ನಾಗಿ ತಾಜುದ್ದೀನ್ ಪಟೇಲ್ ಅವರಿಗೆ ಆಯ್ಕೆ ಮಾಡಿ ಆದೇಶ ಪತ್ರ ಹೊರಡಿಸಿದ್ದಾರೆ.
ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿದ್ದ ನೂತನ ಅಧ್ಯಕ್ಷ ತಾಜ್ಜುದೀನ್ ಪಟೇಲ್ ಅವರು, ನನ್ನ ಮೇಲೆ ನಂಬಿಕೆ ಇಟ್ಟು ನನಗೆ ಜವಾಬ್ದಾರಿ ನೀಡಿದ್ದಾರೆ ಹಾಗಾಗಿ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಹಾಗೂ ಸಮಿತಿ ಅಧ್ಯಕ್ಷರಿಗೆ ಹಾಗೂ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದರು.