ಕಲಬುರಗಿ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಹೋಳಿ ಹಬ್ಬದ ಸಂಭ್ರಮ

ಕಲಬುರಗಿ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಹೋಳಿ ಹಬ್ಬದ ಸಂಭ್ರಮ
ಕಲಬುರಗಿ : ಇಂದು ಹೋಳಿ ಹಬ್ಬದ ಸಂಭ್ರಮ ಎಲ್ಲೆಡೆ ವಿಸ್ಮಯ ಮೂಡಿಸುತ್ತಿದೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಮಹಿಳೆಯರು ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ
ಪರಸ್ಪರ ಬಣ್ಣ ಎರಚಿ, ಹಬ್ಬದ ಖುಷಿಯನ್ನು ಉಲ್ಲಾಸದಿಂದ ಸಂಭ್ರಮಿಸಿದ್ದಾರೆ. ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷೆ ಸೇವಂತ ಪಿ.ಚವ್ಹಾಣ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಪಾಟೀಲ ಅವರು ನೇತೃತ್ವದಲ್ಲಿ ಹೋಳಿ ಹಬ್ಬದ ನಿಮಿತ್ತ ಸಂಘದ ಮಹಿಳಾ ಪದಾಧಿಕಾರಿಗಳು ಸೇರಿ ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳು, ಹಾಡು-ಕೇಳು, ನೃತ್ಯ, ಹಾಗೂ ಸಿಹಿತಿಂಡಿಗಳೊಂದಿಗೆ ಹೋಳಿ ಹಬ್ಬವು ಮತ್ತಷ್ಟು ಹಬ್ಬದ ಆಚರಣೆ ಮಾಡಿದರು