ಕಲಬುರಗಿಯಲ್ಲಿ ಉದ್ಯೋಗ ಮೇಳ: ನಿರುದ್ಯೋಗಿ ಯುವಕರಿಗೆ ಉತ್ತಮ ಅವಕಾಶ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ಉದ್ಯೋಗ ಮೇಳ: ನಿರುದ್ಯೋಗಿ ಯುವಕರಿಗೆ ಉತ್ತಮ ಅವಕಾಶ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ಉದ್ಯೋಗ ಮೇಳ: ನಿರುದ್ಯೋಗಿ ಯುವಕರಿಗೆ ಉತ್ತಮ ಅವಕಾಶ ಸಚಿವ ಪ್ರಿಯಾಂಕ್ ಖರ್ಗೆ 

ಬೆಂಗಳೂರು : ಕಲಬುರಗಿಯಲ್ಲಿ ಮಾರ್ಚ್ ಕೊನೆಯ ವಾರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತ ಪೂರ್ವಭಾವಿ ಸಭೆ ವಿಕಾಸಸೌಧದಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಉದ್ಯೋಗ ಮೇಳದ ಮಹತ್ವ:

ಕಲ್ಯಾಣ ಕರ್ನಾಟಕ ಭಾಗದ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಈ ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಳೆದ ಉದ್ಯೋಗ ಮೇಳದಲ್ಲಿ 189 ಅಭ್ಯರ್ಥಿಗಳು ಸ್ಥಳದಲ್ಲಿಯೇ ನೇಮಕಗೊಂಡಿದ್ದು, ಇದೇ ಮಾದರಿಯಲ್ಲಿ ಈ ಬಾರಿ ಹೆಚ್ಚಿನ ಉದ್ಯೋಗಾವಕಾಶ ಒದಗಿಸುವ ನಿರೀಕ್ಷೆ ಇದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ ಹೇಳಿದರು 

ಸಭೆಯಲ್ಲಿ ಭಾಗವಹಿಸಿದವರು, ಕೆಎಸ್‌ಡಿಸಿ ಅಧ್ಯಕ್ಷೆ ಕಾಂತ ನಾಯಕ್ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳು ಏಕರೂಪ್ ಕೌರ್, ಡಾ. ರಾಗಪ್ರಿಯಾ, ವೈ.ಕೆ. ದಿನೇಶ್ ಕುಮಾರ್ ಮತ್ತು ಇತರರು

ಉದ್ಯೋಗ ಮೇಳದ ನಿಖರ ದಿನಾಂಕ ಮತ್ತು ಸ್ಥಳ ಸಂಬಂಧಿತ ಅಧಿಕೃತ ಮಾಹಿತಿ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ಹೇಳಿದರು