ಕಲಬುರ್ಗಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ ಸಚಿವ ಶರಣಪ್ರಕಾಶ್ ಪಾಟೀಲ

ಕಲಬುರ್ಗಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ ಸಚಿವ ಶರಣಪ್ರಕಾಶ್ ಪಾಟೀಲ

ಕಲಬುರ್ಗಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ ಸಚಿವ ಶರಣಪ್ರಕಾಶ್ ಪಾಟೀಲ 

ಕಲಬುರಗಿ ಸುದ್ದಿ ಗೋಷ್ಠಿ ನಡೆಸಿದ ಸಚಿವ ಶರಣಪ್ರಕಾಶ್ ಪಾಟೀಲ ಮುಂದಿನ‌ ಕೆಲವೇ ದಿನಗಳಲ್ಲಿ ಕಲಬುರಗಿ ನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ಎಐಸಿಸಿ ಅಧ್ಯಕ್ಷಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ‌ ಶ್ರೀ ಸಿದ್ದರಾಮಯ್ಯ ನವರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು 

ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಹಿತ ಕಾಪಾಡಲು ಈಗಾಗಲೇ ಮಂಡಳಿಗೆ ಸೂಚಿಸಿದ್ದೇನೆ. ರೋಗಿಗಳ ಸಾವು ಪ್ರಕರಣ ನಡೆದಿರಲಿಲ್ಲ, ಈಗ ರೋಗಿಗಳಿಬ್ಬರ ಸಾವಿನ‌ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತೇವೆ. ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು 

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕು ನಿಲ್ಲುವುದಿಲ್ಲ. ಬಿಜೆಪಿಯವರು ಸುಮ್ಮನೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಪ್ರತಿ ಪಕ್ಷದವರು ಗ್ಯಾರಂಟಿ ಕಮಿಟಿ ಬಗ್ಗೆ ವಿನಾಕಾರಣ ಟೀಕಿಸುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಮಾಡುವುದಕ್ಕೆ ಬೇರೆ ಕೆಲಸವಿಲ್ಲದ ಕಾರಣ ಬಡವರ ಪರವಾಗಿರುವ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು 

 ಅಕ್ರಮ ಮರಳುಗಾರಿಕೆ ವಿರುದ್ಧವಾಗಿದ್ದೇವೆ. ಈಗಾಗಲೇ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಲು ನಾನು ಸಚಿವ ಪ್ರಿಯಾಂಕ್ ಖರ್ಗೆ  

ಸೂಚಿಸಲಾಗಿದೆ ಎಂದರು ನಾವು ಅಧಿಕಾರದಲ್ಲಿದ್ದೇವೆ ಎಂದೇ ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥಿತವಾಗಿದೆ ಎಂದು ಹೇಳಿದರು