ಕಾರ್ಯಕರ್ತರ ಮನವಿಗೆ ಸ್ಪಂದಿಸಿದ ಸಚಿವ ಶರಣಪ್ರಕಾಶ ಪಾಟೀಲ

ಕಾರ್ಯಕರ್ತರ ಮನವಿಗೆ ಸ್ಪಂದಿಸಿದ ಸಚಿವ ಶರಣಪ್ರಕಾಶ ಪಾಟೀಲ

ಕಾರ್ಯಕರ್ತರ ಮನವಿಗೆ ಸ್ಪಂದಿಸಿದ ಸಚಿವ ಶರಣಪ್ರಕಾಶ ಪಾಟೀಲ  

ಬೆಂಗಳೂರು: ಸಚಿವ ಶರಣಪ್ರಕಾಶ ಪಾಟೀಲ ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಕಾರ್ಯಕರ್ತರ ಮನವಿಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳಿಗೆ ಮನಮುಟ್ಟಿದ ಉತ್ತರಗಳನ್ನು ನೀಡಿದರು.

ಸಚಿವರನ್ನು ಭೇಟಿ ಮಾಡಿದ ಕಾರ್ಯಕರ್ತರು ತಮ್ಮ ಸ್ಥಳೀಯ ಸಮಸ್ಯೆಗಳನ್ನು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು.

ಕಾರ್ಯಕರ್ತರ ಕಾಳಜಿಗಳನ್ನು ಕೇಳಿದ ಸಚಿವರು, ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು. ಜನಸಂಪರ್ಕ ಬೆಳೆಸಲು ಮತ್ತು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಸದಾ ತಾವು ಲಭ್ಯವಿರುವುದಾಗಿ ತಿಳಿಸಿದರು.

 ಪಕ್ಷದ ಪ್ರಮುಖ ಮುಖಂಡರು, ಸ್ಥಳೀಯ ಪ್ರತಿನಿಧಿಗಳು ಹಾಗೂ ಕಲಬುರಗಿ ಹಾಗೂ ಸೇಡಂ ಕಾರ್ಯಕರ್ತರು ಇದ್ದರು.