ಆಳಂದ ಶಾಸಕ ಬಿ.ಆರ್. ಪಾಟೀಲರಿಗೆ ದಾಸೋಹ ಜ್ಞಾನ ರತ್ನ , ನಾಲವಾರ ಶ್ರೀಗಳಿಗೆ ಅಪ್ಪ ಪ್ರಶಸ್ತಿ

ಆಳಂದ ಶಾಸಕ ಬಿ.ಆರ್. ಪಾಟೀಲರಿಗೆ ದಾಸೋಹ ಜ್ಞಾನ ರತ್ನ , ನಾಲವಾರ ಶ್ರೀಗಳಿಗೆ ಅಪ್ಪ ಪ್ರಶಸ್ತಿ

ಆಳಂದ ಶಾಸಕ ಬಿ.ಆರ್. ಪಾಟೀಲರಿಗೆ ದಾಸೋಹ ಜ್ಞಾನ ರತ್ನ , ನಾಲವಾರ ಶ್ರೀಗಳಿಗೆ ಅಪ್ಪ ಪ್ರಶಸ್ತಿ.

ಕಲಬುರಗಿ: ಚಿತ್ತಾಪುರ ತಾಲೂಕಿನ ನಾಲವಾರದಲ್ಲಿರುವ ಕೋರಿಸಿದ್ದೇಶ್ವರ ಮಠದ ಡಾ. ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಯವರಿಗೆ ಅಪ್ಪ ಪ್ರಶಸ್ತಿ ಮತ್ತು ಸಮಾಜಕ್ಕೆ ನೀಡಿದ ಅಪಾರ ಕೊಡುಗೆ ಗುರುತಿಸಿ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರಿಗೆ ಪ್ರತಿಷ್ಠಿತ ದಾಸೋಹ ಜ್ಞಾನ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಈ ಪ್ರಶಸ್ತಿಯು 51ಸಾವಿರ ರೂ. ನಗದು, ಪ್ರಶಸ್ತಿ ಫಲಕ ಮತ್ತು ಪ್ರಶಂಸಾ ಪತ್ರವನ್ನು ಒಳಗೊಂಡಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ತಿಳಿಸಿದ್ದಾರೆ.

ಶಿಕ್ಷಣ, ಸಮಾಜ ಸೇವೆ ಮತ್ತು ಸಮುದಾಯಮುಖಿ ಕಾರ್ಯಗಳಲ್ಲಿ ತಮ್ಮ ಉತ್ತಮ ಸೇವೆಗಾಗಿ ಬಿ.ಆರ್. ಪಾಟೀಲ್ ಅವರು ಈ ಗೌರವಕ್ಕೆ ಪಾತ್ರರಾಗಿದ್ದು , ಗಣ್ಯಮಾನ್ಯಾರು ಇವರಿಗೆ ಅಭಿನಂದನೆಗಳು ಸಲ್ಲಿಸಿದ್ದಾರೆ .ಸಮಾರಂಭದಲ್ಲಿ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.