ವಿಕಾಸಸೌಧದಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್‌ ಪರಿಶೀಲನಾ ಸಭೆ : ಸಚಿವ ಶರಣಪ್ರಕಾಶ ಪಾಟೀಲ

ವಿಕಾಸಸೌಧದಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್‌ ಪರಿಶೀಲನಾ ಸಭೆ : ಸಚಿವ ಶರಣಪ್ರಕಾಶ ಪಾಟೀಲ

ವಿಕಾಸಸೌಧದಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್‌ ಪರಿಶೀಲನಾ ಸಭೆ : ಸಚಿವ ಶರಣಪ್ರಕಾಶ ಪಾಟೀಲ

ಬೆಂಗಳೂರು, ಮಾರ್ಚ್ 20:ವಿಕಾಸಸೌಧದಲ್ಲಿ ನಡೆದ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಪರಿಶೀಲನಾ ಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ ಅವರು ಅಧ್ಯಕ್ಷತೆ ವಹಿಸಿದರು.

ಸಭೆಯಲ್ಲಿ ಬಜೆಟ್‌ನಲ್ಲಿ ಘೋಷಿತ ಭರವಸೆಗಳನ್ನು ವಿಳಂಬವಿಲ್ಲದೆ ಕಾರ್ಯಗತಗೊಳಿಸಲು ಅವರು ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಏಕ್ರೂಪ್ ಕೌರ್, ಎನ್‌ಎಲ್‌ಎಂ ಅಭಿಯಾನದ ನಿರ್ದೇಶಕರಾದ ಪಿಐ ಶ್ರೀವಿದ್ಯಾ ಮತ್ತು ಹೆಚ್ಚುವರಿ ಅಭಿಯಾನ ನಿರ್ದೇಶಕರಾದ ಅರ್ಜುನ್ ಒಡೆಯರ್ ಅವರಿಗೆ ಸ್ಪಷ್ಟ ಸೂಚನೆ ನೀಡಿದರು.

ಸಚಿವರು, ಜೀವನೋಪಾಯ ಮಿಷನ್‌ನಡಿಯಲ್ಲಿ ಪ್ರಗತಿಯ ಮಾಹಿತಿಯನ್ನು ಪರಿಶೀಲಿಸಿ, ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಗುಂಪುಗಳ ಬಲವರ್ಧನೆ, ಮಹಿಳಾ ಸಬಲೀಕರಣ ಹಾಗೂ ಉದ್ಯೋಗಾವಕಾಶ ಸೃಷ್ಟಿಯಂತಹ ಪ್ರಮುಖ ಗುರಿಗಳನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳ ಪ್ರತಿನಿಧಿಗಳು ಹಾಜರಿದ್ದರು.